Sunday, June 7, 2026
Homeಕರಾವಳಿಉಡುಪಿಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಸಮವಸ್ತ್ರ ಹೊರತುಪಡಿಸಿ ಬೇರೆ ಉಡುಪಿಗೆ ಅವಕಾಶ ಇಲ್ಲ; ಕಾಲೇಜು ಆಡಳಿತ...

ಮಂಗಳೂರು ವಿವಿ ಘಟಕ ಕಾಲೇಜಿನಲ್ಲಿ ಸಮವಸ್ತ್ರ ಹೊರತುಪಡಿಸಿ ಬೇರೆ ಉಡುಪಿಗೆ ಅವಕಾಶ ಇಲ್ಲ; ಕಾಲೇಜು ಆಡಳಿತ ಮಂಡಳಿ ಆದೇಶ

- Advertisement -
- Advertisement -

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಹಿಜಾಬ್ ವಿರೋಧಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಲೇಜು ಆಡಳಿತ ಮಂಡಳಿ ಮಣಿದಿದೆ.

ಕಾಲೇಜು ಆವರಣದಲ್ಲಿ ಹಿಬಾಬ್ ನಿಷೇಧಿಸಿ ಕಾಲೇಜು ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ಕಾಲೇಜು ಆವರಣದಲ್ಲಿ ಸಮವಸ್ತ್ರ ಹೊರತುಪಡಿಸಿ ಬೇರೆ ಯಾವುದೇ ಉಡುಪು ಧರಿಸಲು ಅನುಮತಿ ಇರುವುದಿಲ್ಲ ಎಂದು ಆದೇಶ ಹೊರಡಿಸಲಾಗಿದ್ದು, ನಿಯಮ ಉಲ್ಲಂಘಿಸಿದರೆ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

ಈ ಮಧ್ಯೆ ಪ್ರತಿಭಟನಾನಿರತ ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ ವಿವಿ ರಿಜಿಸ್ಟ್ರಾರ್ ಕಿಶೋರ್ ಕುಮಾರ್ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದರು.

ಈ ವೇಳೆ ಕಾಲೇಜು ಪ್ರಾಂಶುಪಾಲರು ಮತ್ತು ಕೆಲ ಶಿಕ್ಷಕರ ವಿರುದ್ದ ವಿದ್ಯಾರ್ಥಿಗಳಿಂದ ದೂರು‌ ಕೂಡಾ ವ್ಯಕ್ತವಾಯಿತು.

ನಾಳೆಯಿಂದ ಯಾವುದೇ ಕಾರಣಕ್ಕೂ ಹಿಜಾಬ್ ಧರಿಸಿದವರಿಗೆ ಅವಕಾಶ ಇಲ್ಲ ಅಂತ ಭರವಸೆ‌ ನೀಡಿದ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ.

ಇನ್ನು ನಾಳೆ ಶಾಸಕ ವೇದವ್ಯಾಸ ಕಾಮತ್ ನೇತೃತ್ವದಲ್ಲಿ ಕಾಲೇಜಿನಲ್ಲಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.‌

- Advertisement -

Latest News

error: Content is protected !!