Thursday, June 4, 2026
Homeತಾಜಾ ಸುದ್ದಿರಾಜ್ಯದಲ್ಲಿ ಮದ್ಯದ ದರ ಹೆಚ್ಚಳ ಚಿಂತನೆ ಇಲ್ಲ: ಅಬಕಾರಿ ಸಚಿವ ಗೋಪಾಲಯ್ಯ ಸ್ಪಷ್ಟನೆ

ರಾಜ್ಯದಲ್ಲಿ ಮದ್ಯದ ದರ ಹೆಚ್ಚಳ ಚಿಂತನೆ ಇಲ್ಲ: ಅಬಕಾರಿ ಸಚಿವ ಗೋಪಾಲಯ್ಯ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. 2022-23 ನೇ ಸಾಲಿನ  ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ  ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ.

ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರಲ್ಲದೇ ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ಗೋಪಾಲಯ್ಯ ತಿಳಿಸಿದ್ದಾರೆ.

ನಾಳೆ ಹಣಕಾಸು ಇಲಾಖೆಯ ಕಾರ್ಯದರ್ಶಿಗಳು ಮತ್ತು ಸಿಎಂ ಜೊತೆ ಚರ್ಚೆ ನಡೆಸಿ ಮುಂದಿನ ಕಾರ್ಯಕ್ರ‌ಮದ‌ ಬಗ್ಗೆ ಚಿಂತನೆ ನಡೆಸಲಾಗುವುದು. ಇಲಾಖೆಯ ಕೆಲವು ಬೇಡಿಕೆಗಳ ಬಗ್ಗೆಯೂ ಸಿಎಂ ಗಮನ ಸೆಳೆಯುವ ಕೆಲಸ ಮಾಡಲಾಗಿದೆ.‌ ಇದಕ್ಕೆ ಬಜೆಟ್ ನಲ್ಲಿ ಅಥವಾ ಆ ನಂತರ ಸೂಕ್ತವಾಗಿ ಸ್ಪಂದಿಸುವ ಭರವಸೆ ಇದೆ ಎಂದು ‌ಅಬಕಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

- Advertisement -

Latest News

error: Content is protected !!