Wednesday, June 24, 2026
Homeತಾಜಾ ಸುದ್ದಿನಾಳೆ ಸರ್ಕಾರಿ ರಜೆ ಇಲ್ಲ; ರಾಜ್ಯ ಸರ್ಕಾರದಿಂದ ಸ್ಪಷ್ಟನೆ

ನಾಳೆ ಸರ್ಕಾರಿ ರಜೆ ಇಲ್ಲ; ರಾಜ್ಯ ಸರ್ಕಾರದಿಂದ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: ವೃಕ್ಷ ಮಾತೆ ಸಾಲುಮರದ ತಿಮ್ಮಕ್ಕ ಅವರ ನಿಧನ ಹಿನ್ನೆಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ನಾಳೆ ಸಕಲ ಸರ್ಕಾರಿ ಗೌರವಗಳೊಂದಿಗೆ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನಡೆಯಲಿದ್ದು, ನಾಳೆ ಸರ್ಕಾರಿ ರಜೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ತಿರುಚಿದ ಸರ್ಕಾರಿ ಆದೇಶ ಪತ್ರವನ್ನು ಕಿಡಿಗೇಡಿಗಳು ಹರಿಬಿಟ್ಟಿದ್ದಾರೆ.

ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರ ನಿಧನದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕಿಡಿಗೇಡಿಗಳು ತಿರುಚಿದ್ದಾರೆ.

ಬೆಂಗಳೂರಿ‌ನ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ ಬೆಳಗ್ಗೆ 7.30ರಿಂದ 10.30ರವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಜ್ಞಾನ ಭಾರತಿ ಬಳಿಯ ಕಲಾ ಗ್ರಾಮದ ಆವರಣದಲ್ಲಿ ತಿಮ್ಮಕ್ಕ ಅವರ ಅಂತ್ಯಕ್ರಿಯೆ ನಡೆಯಲಿದೆ.

- Advertisement -

Latest News

error: Content is protected !!