Thursday, June 4, 2026
Homeಕರಾವಳಿಗುರುವಾರ ಬೆಳಗ್ಗಿನಿಂದ ದಕ್ಷಿಣ ಕನ್ನಡದಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಗುರುವಾರ ಬೆಳಗ್ಗಿನಿಂದ ದಕ್ಷಿಣ ಕನ್ನಡದಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ

- Advertisement -
- Advertisement -

ಮಂಗಳೂರು : ದಕ್ಷಿಣ ಕನ್ನಡದಲ್ಲಿ ಗುರುವಾರದಿಂದ ಮತ್ತೆ ಲಾಕ್ ಡೌನ್ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಸ್ಪಷ್ಟನೆಯನ್ನು ಕೊಟ್ಟಿದ್ದಾರೆ.

ನಾನು ಈಗಾಗಲೇ ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ್ದೇನೆ. ಜಿಲ್ಲೆಯಲ್ಲಿ ಗುರುವಾರದಿಂದ ಯಾವುದೇ ಲಾಕ್ ಡೌನ್ ಇರೋದಿಲ್ಲ ಎಂದು ಅವರು ಹೇಳಿದ್ದಾರೆ. ಇನ್ನು ಜನಪ್ರತಿನಿಧಿಗಳು  ಹಾಗೇ ಸಾರ್ವಜನಿಕರಿಂದ  ಲಾಕ್ ಡೌನ್ ಗೆ ಒಲವು ವ್ಯಕ್ತವಾಗಿತ್ತು. ಜಿಲ್ಲಾಡಳಿತಕ್ಕೆ ಜನಪ್ರತಿನಿಧಿ ಹಾಗೂ ಸಾರ್ವಜನಿಕರು ಲಾಕ್ ಡೌನ್ ಮುಂದುವರೆಸುವಂತೆ ಒತ್ತಾಯಿಸುತ್ತಿಸಿದ್ದರು. ಹಾಗಾಗಿ ಮಂಗಳೂರಿನಲ್ಲಿ ಜನಪ್ರತಿನಿಧಿಗಳ ಸಭೆ ನಡೆಸಿ ಆ ಬಳಿಕ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ ಎಂದು ಮಧ್ಯಾಹ್ನ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದರು.

ಆದರೆ ಲಾಕ್ ಡೌನ್ ಬಗ್ಗೆ ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಸಿಎಂ ಬಿ ಎಸ್ ಯಡಿಯೂರಪ್ಪ  ರಾಜ್ಯದಲ್ಲಿ ಲಾಕ್ ಡೌನ್ ಇಲ್ಲ ಎಂದು ಸ್ಪಷ್ಟಪಡಿಸಿದ್ದರು. ಹಾಗಾಗಿ ಜಿಲ್ಲೆಯಲ್ಲಿ ಸಿಎಂ ನಿರ್ದೇಶನದಂತೆ ಲಾಕ್ ಡೌನ್ ಇರೋದಿಲ್ಲ ಎಂದು ಇದೀಗ ಜಿಲ್ಲಾ ಉಸ್ತುವಾರಿ ಸಚಿವರು ಸ್ಪಷ್ಟಪಡಿಸಿದ್ದಾರೆ.

- Advertisement -

Latest News

error: Content is protected !!