Monday, July 1, 2024
Homeತಾಜಾ ಸುದ್ದಿಈ ವರ್ಷ ಪಠ್ಯಪುಸ್ತಕದಲ್ಲಿ ಮುಖ್ಯ ಬದಲಾವಣೆ ಇಲ್ಲ: ಸಚಿವ ಮಧು ಬಂಗಾರಪ್ಪ

ಈ ವರ್ಷ ಪಠ್ಯಪುಸ್ತಕದಲ್ಲಿ ಮುಖ್ಯ ಬದಲಾವಣೆ ಇಲ್ಲ: ಸಚಿವ ಮಧು ಬಂಗಾರಪ್ಪ

spot_img
- Advertisement -
- Advertisement -

ಮೈಸೂರು: ‘ಶಾಲಾ ಪಠ್ಯಪುಸ್ತಕವನ್ನು ಕಳೆದ ವರ್ಷವೇ ಪರಿಷ್ಕರಿಸಲಾಗಿದ್ದು, ಈ ವರ್ಷ ಯಾವುದೇ ಮುಖ್ಯ ಬದಲಾವಣೆಯಿಲ್ಲ. ಆದರೆ ಕೆಲವು ಪದ ಹಾಗೂ ವಾಕ್ಯಗಳಲ್ಲಷ್ಟೇ ಬದಲಾವಣೆಯಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು.

ಅವರು ಈ ಕುರಿತು ಮಂಗಳವಾರದಂದು ನಗರದ ಕಾಂಗ್ರೆಸ್‌ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ವೆಬ್ ಸೈಟ್ ನಲ್ಲಿ ಪರಿಷ್ಕೃತ ಪಠ್ಯಪುಸ್ತಕಗಳು ಲಭ್ಯವಿವೆ. ಶೇ 95ರಷ್ಟು ಪಠ್ಯಪುಸ್ತಕಗಳು ಈಗಾಗಲೇ ಶಾಲೆಗಳಿಗೆ ತಲುಪಿವೆ. ಶೈಕ್ಷಣಿಕ ಚಟುವಟಿಕೆಗಳಲ್ಲಿ ಮಕ್ಕಳು ಯಾವುದೇ ತೊಂದರೆ ಇಲ್ಲದಂತೆ ತೊಡಗಿಸಿಕೊಳ್ಳಲು ಅಗತ್ಯ ಮೂಲಸೌಕರ್ಯ ಒದಗಿಸಲಾಗಿದೆ. ಕೋವಿಡ್‌ ನಂತರ ಶಾಲಾ ಮಕ್ಕಳಿಗೆ ಬೈಸಿಕಲ್‌ ಸಿಕ್ಕಿಲ್ಲ. ಈ ಬಗ್ಗೆ ಇನ್ನೂ ತೀರ್ಮಾನವಾಗಿಲ್ಲ. ಸರ್ಕಾರ ಸಂಪುಟದಲ್ಲಿ ಚರ್ಚಿಸಿ ವಿತರಿಸಲು ನಿರ್ಧರಿಸಲಾಗುವುದು’ ಎಂದು ಮಾಹಿತಿ ನೀಡಿದರು.

‘ಶಾಲಾಭಿವೃದ್ಧಿ ಸಮಿತಿಗಳಿಗೆ ಶೂ ವಿತರಿಸಲು ಹಣ ಬಿಡುಗಡೆ ಮಾಡಲಾಗಿದೆ. ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಿಸಲಾಗುವುದು. ಬಿಬಿಎಂಪಿ ಶಾಲೆಗಳನ್ನು ಇಲಾಖೆ ತೆಕ್ಕೆಗೆ ತೆಗೆದುಕೊಳ್ಳಲು ಉತ್ಸುಕವಾಗಿದ್ದು, ಈ ಬಗ್ಗೆ ಜೂನ್ 4ರ ನಂತರ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗುವುದು’ ಎಂದು ತಿಳಿಸಿದರು.

‘ಖಾಸಗಿ ಶಾಲೆಗಳಲ್ಲಿ ಬೇಸಿಗೆ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ. ಸರ್ಕಾರಿ ಶಾಲೆಗಳಲ್ಲಿಯೂ ಬೇಸಿಗೆಯಲ್ಲಿ ವಿಶೇಷ ತರಗತಿಗಳನ್ನು ನಡೆಸುವ ಬಗ್ಗೆ ಚಿಂತಿಸಲಾಗುವುದು’ ಎಂದರು.

- Advertisement -
spot_img

Latest News

error: Content is protected !!