Friday, May 3, 2024
Homeತಾಜಾ ಸುದ್ದಿಇನ್ಮೇಲೆ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ

ಇನ್ಮೇಲೆ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ

spot_img
- Advertisement -
- Advertisement -

ಬೆಂಗಳೂರು: ಇನ್ಮೇಲೆ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ದೇವಾಲಯಗಳ್ಲಲಿ ಮೊಬೈಲ್ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

ಈ ಕುರಿತಂತೆ ಇಂದು ಕಂದಾಯ ಇಲಾಖೆಯ ಧಾರ್ಮಿಕ ದತ್ತಿ ವಿಭಾಗದ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ಪಿ ಹೇಮಂತರಾಜು ಸುತ್ತೋಲೆ ಹೊರಡಿಸಿದ್ದಾರೆ. ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗಿರುವುದರಿಂದ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಪೂಜೆ ಸಲ್ಲಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ ಎಂದಿದ್ದಾರೆ.

ಇನ್ನೂ ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ ಸೂಚಿಸಲಾಗಿದೆ. ಈ ಮೂಲಕ ಇನ್ನುಂದೆ ರಾಜ್ಯದ ದೇವಾಲಯಗಳಲ್ಲಿ ಭಕ್ತರು ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಿ, ರಾಜ್ಯ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!