Thursday, May 16, 2024
Homeತಾಜಾ ಸುದ್ದಿH3N2 ಸೋಂಕಿನ ಆತಂಕದ ಪರಿಸ್ಥಿತಿ ನಿರ್ಮಾಣವಾಗಿಲ್ಲ: ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ

H3N2 ಸೋಂಕಿನ ಆತಂಕದ ಪರಿಸ್ಥಿತಿ ನಿರ್ಮಾಣವಾಗಿಲ್ಲ: ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು: H3N2 ವೈರಸ್‌ ಸೋಂಕಿಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.

ಎಚ್‌3ಎನ್‌2 ವೈರಸ್‌ ಹರಡುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಮಿತಿ ಹಾಗೂ ಹಿರಿಯ ಅಧಿಕಾರಿಗೊಳೊಂದಿಗೆ ಸಭೆ ನಡೆಸಿದ ಬಳಿಕ ಮಾಹಿತಿ ನೀಡಿದ ಆರೋಗ್ಯ ಸಚಿವರು,
ಎಲ್ಲಾ ಆಸ್ಪತ್ರೆಗಳ ಆರೋಗ್ಯ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕೆಂದು ಸೂಚನೆ ನೀಡಿ ಆದೇಶ ಹೊರಡಿಸಲಾಗುವುದು. ಹಾಗೆಯೇ ಜನರು ಮುನ್ನೆಚ್ಚರಿಕೆ ವಹಿಸಲು ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್‌ಫ್ಲುಯೆಂಜಗೆ ಪ್ರತಿ ವರ್ಷ ಲಸಿಕೆ ನೀಡುತ್ತಿದ್ದು, ಇದನ್ನು ಎಲ್ಲಾ ಆರೋಗ್ಯ ಸಿಬ್ಬಂದಿ ಪಡೆಯಲು ಲಿಖಿತ ಸೂಚನೆ ನೀಡಲಾಗುವುದು. ಐಸಿಯುನಲ್ಲಿ ಕೆಲಸ ಮಾಡುವವರು ಸೇರಿದಂತೆ ಕೆಲವು ನಿರ್ದಿಷ್ಟ ವೈದ್ಯರು, ಸಿಬ್ಬಂದಿಗೆ ಸರ್ಕಾರದಿಂದಲೇ ಲಸಿಕೆ ನೀಡಲಾಗುವುದು. 2019 ರವರೆಗೆ ಈ ಲಸಿಕೆ ನೀಡಲಾಗುತ್ತಿತ್ತು. ಕೋವಿಡ್‌ ಬಂದ ಬಳಿಕ ನೀಡಿಲ್ಲ. ಈಗ ಮತ್ತೆ ಅದನ್ನು 31 ಜಿಲ್ಲೆಗಳಲ್ಲಿ ನೀಡಲಾಗುವುದು ಎಂದು ಸಚಿವ ಸುಧಾಕರ್ ತಿಳಿಸಿದ್ದಾರೆ.

15 ವರ್ಷಕ್ಕಿಂತ ಕಡಿಮೆ ವಯೋಮಾನದ ಮಕ್ಕಳಲ್ಲಿ, 65 ವರ್ಷ ಮೇಲ್ಪಟ್ಟ ವೃದ್ಧರಿಗೆ ಈ ಸೋಂಕು ಕಂಡುಬರಬಹುದು. ಗರ್ಭಿಣಿಯರಿಗೂ ಸೋಂಕು ಬರುವ ಸಾಧ್ಯತೆ ಹೆಚ್ಚಿದೆ. ಶುಚಿತ್ವ, ಗುಂಪುಗೂಡುವುದನ್ನು ತಡೆಯುವುದು, ಕೈಗಳ ಸ್ವಚ್ಛತೆ ಮೊದಲಾದ ಕ್ರಮಗಳ ಮೂಲಕ ಸೋಂಕು ಹರಡುವುದನ್ನು ತಡೆಯಬಹುದು ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸಲಹೆ ನೀಡಿದ್ದಾರೆ.

- Advertisement -
spot_img

Latest News

error: Content is protected !!