Saturday, May 25, 2024
Homeಕರಾವಳಿದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೋನಾ ಮಾರ್ಗಸೂಚಿ ಹೊರಡಿಸಿಲ್ಲ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸ್ಪಷ್ಟನೆ

ದ.ಕ. ಜಿಲ್ಲೆಯಲ್ಲಿ ಯಾವುದೇ ಹೊಸ ಕೊರೋನಾ ಮಾರ್ಗಸೂಚಿ ಹೊರಡಿಸಿಲ್ಲ: ಜಿಲ್ಲಾಧಿಕಾರಿ ಡಾ.ರಾಜೇಂದ್ರ ಸ್ಪಷ್ಟನೆ

spot_img
- Advertisement -
- Advertisement -

ಮಂಗಳೂರು: ಜಿಲ್ಲೆಯಾದ್ಯಂತ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿ ಹೆಚ್ಚುವರಿ ನಿರ್ಬಂಧಕ ಕ್ರಮಗಳು ಜಾರಿಯಾಗಿರುವ ಬಗ್ಗೆ ವದಂತಿಗಳು ಸಾಮಾಜಿಕ ಜಾಲತಾಣ, ಸುದ್ದಿ ಮಾಧ್ಯಮಗಳಲ್ಲಿ ಹರಿದಾಡುತ್ತಿರುವುದರಿಂದ ಸಾರ್ವಜನಿಕರಲ್ಲಿ ಗೊಂದಲವುಂಟಾಗುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ. ಇಂತಹ ಯಾವುದೇ ಆದೇಶ ಜಿಲ್ಲಾಡಳಿತ ಮಾಡಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಇದು ಸುಳ್ಳು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಕೋವಿಡ್-19 ಸೋಂಕು ಪ್ರಸರಣದ ಸರಪಳಿಯನ್ನು ತುಂಡರಿಸುವ ನಿಟ್ಟಿನಲ್ಲಿ ಮೇ 10ರ ಬೆಳಗ್ಗೆ 6 ಗಂಟೆಯಿಂದ ಮೇ 24ರ ಬೆಳಗ್ಗೆ 6 ಗಂಟೆಯವರೆಗೆ ಅನ್ವಯವಾಗುವಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸಿ ಆದೇಶಿಸಲಾಗಿದ್ದು, ಪ್ರಸ್ತುತ ಸದ್ರಿ ಮಾರ್ಗಸೂಚಿಗಳು ಜಿಲ್ಲೆಯಾದ್ಯಂತ ಜಾರಿಯಲ್ಲಿರುತ್ತವೆ.

ಮೇ 24ರ ಬಳಿಕ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗುವುದು. ಸಾರ್ವಜನಿಕರು ಯಾವುದೇ ವದಂತಿಗಳಿಂದ ಗೊಂದಲಕ್ಕೀಡಾಗದೆ ಜಿಲ್ಲಾಡಳಿತದಿಂದ ನೀಡಲಾಗುವ ನಿರ್ದೇಶನಗಳನ್ನು ಪಾಲಿಸಿ ಕೋಡ್ -19 ನಿಯಂತ್ರಣ ಕಾರ್ಯದಲ್ಲಿ ಸಹಕರಿಸುವಂತೆ ಕೋರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!