Friday, May 17, 2024
Homeತಾಜಾ ಸುದ್ದಿರಾಜ್ಯದಲ್ಲಿ 6 ಮತ್ತು 7ನೇ ತರಗತಿ ಮಕ್ಕಳಿಗೂ ಆನ್​ಲೈನ್​​ ಕ್ಲಾಸ್​ ಇರಲ್ಲ!

ರಾಜ್ಯದಲ್ಲಿ 6 ಮತ್ತು 7ನೇ ತರಗತಿ ಮಕ್ಕಳಿಗೂ ಆನ್​ಲೈನ್​​ ಕ್ಲಾಸ್​ ಇರಲ್ಲ!

spot_img
- Advertisement -
- Advertisement -

ಬೆಂಗಳೂರು: ಒಂದರಿಂದ ಏಳನೇ ತರಗತಿಯವರೆಗೆ ಆನ್‌ಲೈನ್‌ ತರಗತಿ ನಡೆಸದಿರಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಇಂದು ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ರಾಜ್ಯದ ಖಾಸಗಿ ಶಾಲೆಗಳು ಶುಲ್ಕದ ಆಸೆಗೆ ಬಿದ್ದು ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲಾ ವಿದ್ಯಾಥಿರ್ಗಳ ಮೇಲೆ ಹೊರಿಸಿದ್ದ ಆನ್​ಲೈನ್​ ಪಾಠದ ಹೊರೆಯನ್ನು ಈಗಾಗಲೇ ಸರ್ಕಾರ ಇಳಿಸಿದೆ. ಇದರ ಮುಂದುವರಿದ ಭಾಗವಾಗಿ 6 ಮತ್ತು 7ನೇ ತರಗತಿಯ ಮಕ್ಕಳಿಗೂ ಆನ್​ಲೈನ್​ ಗುಮ್ಮದಿಂದ ಮುಕ್ತಿ ನೀಡುವ ಸಂಬಂಧ ಇಂದಿನ(ಗುರುವಾರ) ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

1 ರಿಂದ 7ನೇ ತರಗತಿವರೆಗೆ ಆನ್‌ಲೈನ್‌ ತರಗತಿಗಳು ನಡೆಯುವುದಿಲ್ಲ. ಇದು ಸಂಪುಟದ ತೀರ್ಮಾನವಾಗಿ ಇದ್ದು, ಕೂಡಲೇ ಶಿಕ್ಷಣ ಇಲಾಖೆಯ ಮೂಲಕ ಈ ಮಾಹಿತಿಯನ್ನು ತಲುಪಿಸಲಾಗುತ್ತದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಐದನೇ ತರಗತಿಯವರೆಗೆ ಆನ್‌ಲೈನ್‌ ತರಗತಿ ನಡೆಸಬಾರದು ಎಂದು ಇದಕ್ಕೂ ಮುನ್ನ ತೀರ್ಮಾನಿಸಲಾಗಿತ್ತು. ಶಿಕ್ಷಣ ಇಲಾಖೆ ಕೈಗೊಂಡಿದ್ದ ತೀರ್ಮಾನ ಎಂದು ಚರ್ಚಿಸಿದ ತರಗತಿವರೆಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!