Tuesday, June 23, 2026
Homeತಾಜಾ ಸುದ್ದಿಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಅವಕಾಶ ನೀಡದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

ಸಫಾರಿಯಲ್ಲಿ ಇನ್ನು ಮುಂದೆ ತೆರೆದ ವಾಹನಗಳಿಗೆ ಅವಕಾಶ ನೀಡದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

- Advertisement -
- Advertisement -

ಬೆಂಗಳೂರು: ರಾಜ್ಯದ ಐದು ಹುಲಿ ಸಂರಕ್ಷಿತ ಪ್ರದೇಶ ಹಾಗೂ ವನ್ಯಜೀವಿಧಾಮಗಳ ಸಫಾರಿಯಲ್ಲಿ ತೆರೆದ ಕ್ಯಾಂಪರ್ ಬದಲಿಗೆ ಸುರಕ್ಷಿತ ಬಸ್ ಬಳಕೆ ಮಾಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.ಕೊಡಗು ಜಿಲ್ಲೆಯ ದುಬಾರೆ ಆನೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾಳಗದ ವೇಳೆ ಪ್ರವಾಸಿ ಮಹಿಳೆ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಸಫಾರಿಗಳಲ್ಲಿ ಪ್ರವಾಸಿಗರ ಸುರಕ್ಷತೆಗೂ ಹೆಚ್ಚಿನ ಗಮನ ಹರಿಸುವಂತೆ ಅರಣ್ಯ ಸಚಿವರು ಅರಣ್ಯ ಇಲಾಖೆಗೆ ಸೂಚನೆ ನೀಡಿದ್ದಾರೆ.ಸದ್ಯ ಬಂಡೀಪುರ, ನಾಗರಹೊಳೆ, ಕಾಳಿ, ಬಿಳಿಗಿರಿರಂಗನಬೆಟ್ಟ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮಲೆ ಮಹದೇಶ್ವರ ಬೆಟ್ಟ, ದಾಂಡೇಲಿ, ಕೆ.ಗುಡಿ ಸೇರಿದಂತೆ ರಾಜ್ಯದ ವಿವಿಧ ವನ್ಯಜೀವಿಧಾಮ ಮತ್ತು ಕಾನನಗಳಲ್ಲಿ ಸಫಾರಿ ನಡೆಯುತ್ತಿದೆ.ಅಲ್ಲದೇ ಸಫಾರಿಗೆ ಬರುವ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಇನ್ನು ಮುಂದೆ ತೆರೆದ ಕ್ಯಾಂಪರ್ ವಾಹನಗಳ ಬದಲಿಗೆ ಸಂಪೂರ್ಣ ಸುರಕ್ಷಿತವಾದ ಬಸ್ ಸಫಾರಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಮತ್ತು ಹಾಲಿ ಬಳಕೆಯಲ್ಲಿರುವ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳುಗಳಿಂದ ಕೂಡಿದ ಜಾಲರಿಗಳನ್ನು ಅಥವಾ ಒಡೆಯಲಾಗದ ಗಾಜು ಅಳವಡಿಸಿ ಬಳಸುವ ಬಗ್ಗೆ ಕ್ರಮವಹಿಸಲು ಸೂಚನೆ ‌ನೀಡಲಾಗಿದೆ.ಇದೇ ವೇಳೆ, ಯಾವುದೇ ಪ್ರವಾಸಿಗರು ಅರಣ್ಯದೊಳಗೆ ಇಳಿಯಲು ಅವಕಾಶ ನೀಡದಂತೆ ಮತ್ತು ಪ್ರತಿ ಸಫಾರಿ ವಾಹನದಲ್ಲಿ ಪ್ರಥಮ ಚಿಕಿತ್ಸೆಯ ಕಿಟ್ ಹಾಗೂ ಸಫಾರಿ ಕೇಂದ್ರಗಳಿಗೆ ಸಮೀಪದಲ್ಲಿ ಆ್ಯಂಬ್ಯುಲೆನ್ಸ್ ವಾಹನ ಇರುವುದನ್ನು ಖಾತ್ರಿಪಡಿಸಿಕೊಳ್ಳುವಂತೆಯೂ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ ನೀಡಿದ್ದಾರೆ.

- Advertisement -

Latest News

error: Content is protected !!