- Advertisement -
- Advertisement -
ಮಂಗಳೂರು: ಹಂಪನಕಟ್ಟೆ ವಿಶ್ವವಿದ್ಯಾನಿಲಯದ ಘಟಕ ಕಾಲೇಜಿನಲ್ಲಿ ಹಿಜಾಬ್ ವಿವಾದ ಬಗೆಹರಿಯುವ ಲಕ್ಷಣ ಸದ್ಯಕ್ಕಂತೂ ಗೋಚರಿಸುತ್ತಿಲ್ಲ.
ಕಾಲೇಜಿನಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿನಿಯರು ಟ್ರಾನ್ಸ್ಫರ್ ಸರ್ಟಿಫಿಕೇಟ್ ಪಡೆಯಲು ಮುಂದಾಗಿದ್ದಾರೆ.
ಇತ್ತೀಚೆಗೆ ಕಾಲೇಜಿನ ಹಿಜಾಬ್ ವಿವಾದ ರಾಜ್ಯದಲ್ಲಿ ಮತ್ತೆ ಸುದ್ದಿಯಾಗಿತ್ತು. ಮಂಗಳೂರು ವಿ ವಿ ಕಾಲೇಜಿನಲ್ಲಿ 44 ಮುಸ್ಲಿಂ ವಿದ್ಯಾರ್ಥಿನಿಯರಿದ್ದು, ಇವರಲ್ಲಿ 15 ಮಂದಿ ಹಿಜಾಬ್ ತೆಗೆದು ಕಾಲೇಜಿಗೆ ಬರಲು ನಿರಾಕರಿಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಮಂಗಳೂರು ವಿವಿ ಕಾಲೇಜಿನ ಪ್ರಾಂಶುಪಾಲೆ ಅನುಸೂಯ, ಟಿಸಿ ಪಡೆಯುವ ಬಗ್ಗೆ ವಿದ್ಯಾರ್ಥಿನಿಯರು ಮಾತನಾಡಿದ್ದರು. ಆದರೆ ಯಾರು ಈವರೆಗೆ ಟಿಸಿ ಪಡೆಯಲು ಅರ್ಜಿ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
- Advertisement -