Saturday, May 18, 2024
Homeಕರಾವಳಿಉಡುಪಿಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ : ಹೈಕೋರ್ಟ್ ನಿಂದ ಮಹತ್ವದ ಆದೇಶ

ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ : ಹೈಕೋರ್ಟ್ ನಿಂದ ಮಹತ್ವದ ಆದೇಶ

spot_img
- Advertisement -
- Advertisement -

ಬೆಂಗಳೂರು : ಹಿಬಾಜ್ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಅವಕಾಶ ಇಲ್ಲ ಎನ್ನುವ ಮಹತ್ವದ ತೀರ್ಪು ನೀಡಿದೆ. ಸರ್ಕಾರದ ಸಮವಸ್ತ್ರದ ಆದೇಶವನ್ನು ಎತ್ತಿ ಹಿಡಿದಿದೆ.

ಶಿಕ್ಷಣಸಂಸ್ಥೆಗಳಿಗೆ ಮಾತ್ರ ಸಮವಸ್ತ್ರವನ್ನು ನಿಗದಿ ಪಡಿಸುವ ಅಧಿಕಾರ ಇದೆ ಎಂದು ಸ್ಪಷ್ಟಪಡಿಸಿದೆ. ಮುಸ್ಲಿಂ ಮಹಿಳೆಯರು ಹಿಬಾಜ್‌ ಧರಿಸುವುದು ಇಸ್ಲಾಂನಲ್ಲಿ ಅಗತ್ಯ ಧಾರ್ಮಿಕ ಆಚರಣೆಯಲ್ಲ.  ಶಾಲೆಯಲ್ಲಿ ಸಮವಸ್ತ್ರ ಸೂಚಿಸಿರುವುದು ಒಂದು ಸಮಂಜಸವಾದ ನಿರ್ಬಂಧವಾಗಿದ್ದು, ವಿದ್ಯಾರ್ಥಿಗಳು ಅದನ್ನು ಆಕ್ಷೇಪಿಸುವಂತಿಲ್ಲ. ಆದೇಶ ಮಾಡಲು ಸರ್ಕಾರಕ್ಕೆ ಅಧಿಕಾರವಿದೆ ಎಂದು ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹೇಳಿದೆ.

ಈ ಮೂಲಕ ಹೈಕೋರ್ಟ್ ಸಿಜೆ ರಿತುರಾಜ್ ಅವಸ್ಥಿ ನೇತೃತ್ವದ ಪೂರ್ಣ ಪೀಠ ಮಹತ್ವದ ಇಂದು ತೀರ್ಪು ನೀಡಿದೆ. ನಿರಂತರ ಹನ್ನೊಂದು ದಿನಗಳ ವಿಚಾರಣೆ ಬಳಿಕ ಇಂದು ತೀರ್ಪು ಪ್ರಕಟವಾಗಿದೆ.

- Advertisement -
spot_img

Latest News

error: Content is protected !!