- Advertisement -
- Advertisement -
ಬೆಂಗಳೂರು: ಲಾಕ್ಡೌನ್ ಮುಗಿಯುವವರೆಗೂ ಶಾಲೆಗಳು ಪೋಷಕರಿಂದ ಶುಲ್ಕ ವಸೂಲಿಗೆ ಮುಂದಾಗಬಾರದೆಂದು ಸಚಿವ ಸುರೇಶ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಸಮಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡೋ ಶಿಕ್ಷಕ ಸಿಬ್ಬಂದಿ ವೇತನ ಇಲ್ಲದೇ ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಮಾನವೀಯ ನೆಲೆಗಟ್ಟಿನಲ್ಲಿ ಸರ್ಕಾರ ಬೋಧನಾ ಶುಲ್ಕವನ್ನು ಸಂಗ್ರಹಿಸಲು ಅವಕಾಶ ನೀಡುವಂತೆ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಮನವಿ ಮಾಡಿವೆ. ಈ ಹಿನ್ನೆಲೆಯಲ್ಲಿ ಸರ್ಕಾರ ಚರ್ಚೆ ನಡೆಸಿ ಕೆಲವು ಕ್ರಮಗಳನ್ನು ಕೈಗೊಂಡಿದೆ.
ಸರ್ಕಾರ ಕೈಗೊಂಡಿರುವ ಕ್ರಮಗಳು:
- ಯಾವ ಪೋಷಕರು ತಮ್ಮ ಮಕ್ಕಳ ಬೋಧನಾ ಶುಲ್ಕವನ್ನು ಕಟ್ಟಲು ಆರ್ಥಿಕವಾಗಿ ಸಮರ್ಥರಿದ್ದಾರೋ ಹಾಗೂ ಸ್ವಯಂ ಪ್ರೇರಿತವಾಗಿ ಶುಲ್ಕ ಪಾವತಿಸಲು ಸಿದ್ಧರಾಗಿದ್ದಾರೋ ಅಂತವರಿಂದ ಶುಲ್ಕ ಪಾವತಿಸಿಕೊಳ್ಳಹುದು.
- ಒಂದು ವೇಳೆ ಸದ್ಯದ ಮಟ್ಟಿಗೆ ಶುಲ್ಕ ಪಾವತಿಸಲು ಅಸಹಾಯಕರಾಗಿರೋ ಪೋಷಕರಿಂದ ಶುಲ್ಕ ವಸೂಲಿ ಮಾಡುವಂತಿಲ್ಲ. ಅಕಸ್ಮಾತಾಗಿ ಪೋಷಕರ ಮೇಲೆ ಒತ್ತಡ ಹೇರಿ ಶುಲ್ಕ ಪಾವತಿಸಿಕೊಂಡಿದ್ದು ತಿಳಿದುಬಂದ್ರೆ ಅಂತಹ ಶಾಲಾ-ಕಾಲೇಜುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು.
- ಪೋಷಕರು ನೀಡುವ ಶುಲ್ಕವನ್ನು ಶಾಲಾ-ಕಾಲೇಜುಗಳಲ್ಲಿ ಕೆಲಸ ಮಾಡೋ ಸಿಬ್ಬಂದಿಗೆ ವೇತನ ನೀಡುವುದಕ್ಕೆ ಮೊದಲ ಆದ್ಯತೆ ನೀಡಬೇಕು ಅಂತ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಸೂಚನೆ ರವಾನಿಸಿದ್ದಾರೆ.
- Advertisement -