Saturday, May 4, 2024
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಪ್ರಸ್ತಾವನೆ ಸದ್ಯಕ್ಕಿಲ್ಲ: ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟನೆ

ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಪ್ರಸ್ತಾವನೆ ಸದ್ಯಕ್ಕಿಲ್ಲ: ವಿಧಾನಸಭೆಯಲ್ಲಿ ರಾಜ್ಯ ಸರ್ಕಾರ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು: ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಪ್ರಸ್ತಾವನೆ ಸದ್ಯಕ್ಕಿಲ್ಲ ಎಂದು ರಾಜ್ಯ ಸರ್ಕಾರ‌ ಸ್ಪಷ್ಟಪಡಿಸಿದೆ.

ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ಕಲಾಪದಲ್ಲಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್, ಸದ್ಯಕ್ಕೆ ಪ್ರಸ್ತಾವನೆ ಇಲ್ಲ, ಮುಂದೆ ಪರಿಶೀಲನೆ ಮಾಡುವುದಾಗಿ ಹೇಳಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಉಪ್ಪೂರು ಗ್ರಾಮದಲ್ಲಿ ಅಗತ್ಯವಿರುವ ಸರ್ಕಾರಿ ಜಮೀನು ಗುರುತಿಸಲಾಗಿದ್ದರೂ ಮಂಜೂರಾತಿ ಸಿಕ್ಕಿಲ್ಲ.

ರಾಜ್ಯ ಸರ್ಕಾರದ ವತಿಯಿಂದ ಹೊಸ ಮೆಡಿಕಲ್ ಕಾಲೇಜು ಸ್ಥಾಪಿಸಲು ಅಂದಾಜು 610 ಕೋಟಿ ರೂಪಾಯಿಗಳ ಅನಾವರ್ತಕ ವೆಚ್ಚ ಮತ್ತು ವಾರ್ಷಿಕ 60 ಕೋಟಿ ರೂಪಾಯಿಗಳ ಆವರ್ತಕ ವೆಚ್ಚದ ಅವಶ್ಯಕತೆ ಬೀಳುತ್ತದೆ.

- Advertisement -
spot_img

Latest News

error: Content is protected !!