Tuesday, May 14, 2024
Homeತಾಜಾ ಸುದ್ದಿಕಡಿಮೆ ವಿದ್ಯಾರ್ಹತೆಯ ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತಗೆದುಹಾಕುವ ಪ್ರಶ್ನೆಯೇ ಇಲ್ಲ: ವಿಧಾನ ಪರಿಷತ್ ನಲ್ಲಿ ಮಹಿಳಾ...

ಕಡಿಮೆ ವಿದ್ಯಾರ್ಹತೆಯ ಅಂಗನವಾಡಿ ಕಾರ್ಯಕರ್ತೆಯರನ್ನು ಕೆಲಸದಿಂದ ತಗೆದುಹಾಕುವ ಪ್ರಶ್ನೆಯೇ ಇಲ್ಲ: ವಿಧಾನ ಪರಿಷತ್ ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯದ ಅಂಗನವಾಡಿಗಳಲ್ಲಿ ಅಳವಡಿಸಲಾಗುತ್ತಿದ್ದು, ಹೆಚ್ಚಿನ ವಿದ್ಯಾರ್ಹತೆ ಹೊಂದಿರದೇ ಇರುವ ಅಂಗನವಾಡಿ ಕಾರ್ಯಕರ್ತೆಯರನ್ನ ಕೆಲಸದಿಂದ ತಗೆದು ಹಾಕುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಹಾಲಪ್ಪ ಆಚಾರ್‌ ಸ್ಪಷ್ಟಪಡಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಇಂದು ಪ್ರಶ್ನೋತ್ತರ ಕಲಾಪದಲ್ಲಿ ವಿಧಾನಪರಿಷತ್‌ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ಉತ್ತರಿಸುವ ಸಂದರ್ಭದಲ್ಲಿ ಈ ವಿಷಯವನ್ನು ಸಚಿವ ಹಾಲಪ್ಪ ಆಚಾರ್ ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಸುಮಾರು 66,361 ಅಂಗನವಾಡಿ ಕೇಂದ್ರಗಳಿವೆ. ಇತ್ತೀಚಿಗೆ ರಾಜ್ಯ ಸರಕಾರ ನೂತನ 4,244 ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ಅಧಿಕೃತ ಆದೇಶವನ್ನು ಹೊರಡಿಸಿದೆ. ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಯಕರ್ತೆಯರ ಪೈಕಿ 732 ಜನ ಸ್ನಾತಕೋತ್ತರ ಪದವಿಧರರಿದ್ದಾರೆ. 6,017 ಪದವೀಧರರು, 14,303 ಪಿಯುಸಿ ಮತ್ತು 40,786 ಅಂಗನವಾಡಿ ಕಾರ್ಯಕರ್ತೆಯರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿದ್ದಾರೆ. ಪಿಯುಸಿ ಗಿಂತ ಹೆಚ್ಚಿನ ವಿದ್ಯಾಹರ್ತೆ ಹೊಂದಿರುವ ಸುಮಾರು 20 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಮೊದಲ ಹಂತದಲ್ಲಿ ಎನ್‌ಇಪಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಸಚಿವರು ಹೇಳಿದರು.

ಇನ್ನುಳಿದ ಅಂಗನವಾಡಿ ಕೇಂದ್ರಗಳಲ್ಲಿರುವ ಅಂಗನವಾಡಿ ಕಾರ್ಯಕರ್ತೆಯರು ಕಡಿಮೆ ವಿದ್ಯಾರ್ಹತೆ ಹೊಂದಿದ್ದು, ಅವರಿಗೆ ಹೆಚ್ಚಿನ ತರಬೇತಿ ನೀಡುವ ಮೂಲಕ ಆ ಕೇಂದ್ರಗಳಲ್ಲೂ ನೂತನ ಪಠ್ಯಕ್ರಮ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿರುವ ಸಂಧರ್ಭದಲ್ಲಿ 6 ತಿಂಗಳಿನಿಂದ 1 ವರ್ಷದ ವರೆಗೂ ಡಿಪ್ಲೊಮಾ ತರಬೇತಿ ನೀಡಲು ಯೋಜಿಸಲಾಗಿದೆ. ಯಾವುದೇ ಹಂತದಲ್ಲಿಯೂ ಅವರನ್ನ ಕೆಲಸದಿಂದ ತಗೆಯುವ ಪ್ರಶ್ನೆ ಸರಕಾರದ ಮುಂದೆ ಇಲ್ಲ ಎಂದು ಸಚಿವರು ಸದನದಲ್ಲಿ ಸ್ಪಷ್ಟಪಡಿಸಿದರು.

- Advertisement -
spot_img

Latest News

error: Content is protected !!