Saturday, June 6, 2026
Homeಕರಾವಳಿಸುರತ್ಕಲ್ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಉತ್ತರ

ಸುರತ್ಕಲ್ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ಉತ್ತರ

- Advertisement -
- Advertisement -

ಬೆಂಗಳೂರು: ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ಕಲಾಪದಲ್ಲಿ ಮಂಗಳೂರು ಉತ್ತರ ಶಾಸಕ ಡಾ‌. ವೈ. ಭರತ್ ಶೆಟ್ಟಿ ಕೇಳಿದ್ದ ಪ್ರಶ್ನೆಗೆ ರಾಜ್ಯ ಸರ್ಕಾರ ಈ ಉತ್ತರ ನೀಡಿದೆ.

ಇಂಡಿಯನ್ ಪಬ್ಲಿಕ್ ಹೆಲ್ತ್ ಸ್ಟ್ಯಾಂಡರ್ಡ್ ಮಾರ್ಗಸೂಚಿ ಅನ್ವಯ ಎರಡು ಸಮುದಾಯ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶವಿದ್ದು, ಈಗಾಗಲೇ ಮಂಗಳೂರು ತಾಲೂಕಿನಲ್ಲಿ ಎರಡು ಸಮುದಾಯ ಆರೋಗ್ಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿರುವುದರಿಂದ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆ ಇಲ್ಲ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಉತ್ತರದಲ್ಲಿ ಉಲ್ಲೇಖಿಸಿದ್ದಾರೆ.

- Advertisement -

Latest News

error: Content is protected !!