Wednesday, May 15, 2024
Homeತಾಜಾ ಸುದ್ದಿಹಿಜಾಬ್ ತೀರ್ಪಿನ ಬಗ್ಗೆ ಯಾವುದೇ ಪ್ರಚೋದನಾಕಾರಿ ಹೇಳಿಕೆ ನೀಡಬಾರದು: ನಳಿನ್ ಕುಮಾರ್ ಕಟೀಲ್

ಹಿಜಾಬ್ ತೀರ್ಪಿನ ಬಗ್ಗೆ ಯಾವುದೇ ಪ್ರಚೋದನಾಕಾರಿ ಹೇಳಿಕೆ ನೀಡಬಾರದು: ನಳಿನ್ ಕುಮಾರ್ ಕಟೀಲ್

spot_img
- Advertisement -
- Advertisement -

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ತೀರ್ಪನ್ನು ಸಹಜವಾಗಿ ಸ್ವೀಕರಿಸಬೇಕು. ತೀರ್ಪಿನ ಬಗ್ಗೆ ಯಾವುದೇ ಪ್ರಚೋದನಾಕಾರಿ ಹೇಳಿಕೆ ನೀಡಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹಿಜಾಬ್ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಅನೇಕ ಹೇಳಿಕೆಗಳನ್ನು ಕೆಲವರು ನೀಡುತ್ತಿದ್ದು ಇದರಿಂದ ಸಮಾಜದಲ್ಲಿ ಶಾಂತಿ ಕೆಡುತ್ತಿದೆ. ಹಾಗಾಗಿ ತೀರ್ಪನ್ನು ಸಹಜವಾಗಿ ಸ್ವೀಕರಿಸಬೇಕು. ತೀರ್ಪಿನ ಬಗ್ಗೆ ಯಾವುದೇ ಪ್ರಚೋದನಾಕಾರಿ ಹೇಳಿಕೆ ನೀಡಬಾರದು ಎಂದು ಪಕ್ಷದ ಕಾರ್ಯಕರ್ತರು ಮತ್ತು ನಾಯಕರಿಗೆ ಮನವಿ ಮಾಡಿದ್ದಾರೆ.

ಇನ್ನು ರಾಜ್ಯದ ಜನರಲ್ಲಿ ಶಾಂತಿ ಕಾಪಾಡುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ, ರಾಜ್ಯಾದ್ಯಂತ ವ್ಯಾಪಕ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸರ್ಕಾರದ ಆದೇಶ ಕಾನೂನು ಬದ್ದವಾಗಿದೆ. ಸರ್ಕಾರ ಹೊರಡಿಸಿದ ವಸ್ತ್ರಸಂಹಿತೆ ಆದೇಶವನ್ನು ಪ್ರಶ್ನಿಸುವಂತಿಲ್ಲ. ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಸರ್ಕಾರ ಆದೇಶ ಕಾನೂನು ಬದ್ಧವಾಗಿದೆ. ಹಿಜಾಬ್ ಧರಿಸುವಂತೆ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ವಜಾಗೊಳಿಸಿ ಶಾಲಾ ಕಾಲೇಜುಗಳಲ್ಲಿ ಸಮವಸ್ತ್ರ ಧಾರಣೆ ಕಡ್ಡಾಯ ಎನ್ನುವ ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ.

- Advertisement -
spot_img

Latest News

error: Content is protected !!