Friday, May 3, 2024
Homeಕರಾವಳಿಪಠ್ಯ ಪುಸ್ತಕದಲ್ಲಿ ನಾರಾಯಣ ಗುರು ವಿಚಾರ ಕೈಬಿಡುವ ಪ್ರಶ್ನೆಯೇ ಇಲ್ಲ : ಸಚಿವ ಕೋಟ ಶ್ರೀನಿವಾಸ...

ಪಠ್ಯ ಪುಸ್ತಕದಲ್ಲಿ ನಾರಾಯಣ ಗುರು ವಿಚಾರ ಕೈಬಿಡುವ ಪ್ರಶ್ನೆಯೇ ಇಲ್ಲ : ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಟ್ಟ ಕುರಿತ ವಿವಾದದ ಬಗ್ಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸ್ಪಷ್ಟನೆ ನೀಡಿದ್ದಾರೆ.

ಯಾವುದೇ ಕಾರಣಕ್ಕೂ ಶಿಕ್ಷಣ ಇಲಾಖೆಯ ಪಠ್ಯಪುಸ್ತಕದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈ ಬಿಡುವ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವ ನಾಗೇಶ್ ಅವರನ್ನು ಈ ಕುರಿತು ಬೇಟಿಯಾಗಿ ನಾನು ಮಾತನಾಡಿದ್ದು, ಪಠ್ಯಪುಸ್ತಕದಲ್ಲಿ ನಾರಾಯಣಗುರುಗಳ ಸಂದೇಶವನ್ನು ಒಳಗೊಂಡ ಪಾಠವನ್ನು ಕೈಬಿಡುವ ಪ್ರಶ್ನೆ ಇಲ್ಲ ಎಂದು ಸಚಿವ ಕೋಟ ಸ್ಪಷ್ಟಪಡಿಸಿದ್ದಾರೆ.

ರಾಜ್ಯದಾದ್ಯಂತ ಇರುವ ಈಡಿಗ, ಬಿಲ್ಲವ ಸಮುದಾಯ ಸೇರಿದಂತೆ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಗಳು ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮನವಿ ಮಾಡಿದ್ದಾರೆ.

ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ
ಭೇಟಿಯಾಗಿದ್ದರು.‌

- Advertisement -
spot_img

Latest News

error: Content is protected !!