Tuesday, June 23, 2026
Homeಪ್ರಮುಖ-ಸುದ್ದಿಕಾಂಗ್ರೆಸ್ ಸೇರಲ್ಲ, ಬಿಜೆಪಿ ಶುದ್ದೀಕರಣವಾಗುವವರೆಗೆ ವಿರಮಿಸಲ್ಲ; ಬೆಂಗಳೂರಿನಲ್ಲಿ ಮಾಜಿ ಸಿಎಂ ಡಿವಿಎಸ್ ಘೋಷಣೆ

ಕಾಂಗ್ರೆಸ್ ಸೇರಲ್ಲ, ಬಿಜೆಪಿ ಶುದ್ದೀಕರಣವಾಗುವವರೆಗೆ ವಿರಮಿಸಲ್ಲ; ಬೆಂಗಳೂರಿನಲ್ಲಿ ಮಾಜಿ ಸಿಎಂ ಡಿವಿಎಸ್ ಘೋಷಣೆ

- Advertisement -
- Advertisement -

ಬೆಂಗಳೂರು: ಬಿಜೆಪಿ ತೊರೆಯುವುದಿಲ್ಲ ಮತ್ತು ಕಾಂಗ್ರೆಸ್ ಸೇರ್ಪಡೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನ ಸಂಜಯನಗರದ ಖಾಸಗಿ ನಿವಾಸದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಡಿವಿಎಸ್, ಮೋದಿ ಮತ್ತೊಮ್ಮೆ ಪ್ರಧಾನಿ ಆಗಲು ರಾಜ್ಯದಲ್ಲಿ ಬಿಜೆಪಿ ಜನರು ಒಪ್ಪಿಕೊಳ್ಳುವ ಪಕ್ಷ ಆಗಬೇಕು, ಮೋದಿ ಹೇಳಿದ ಬಿಜೆಪಿ ಕರ್ನಾಟಕದಲ್ಲಿ ಇರಬೇಕು ಎಂದು ಹೇಳಿದ್ದಾರೆ.

ಮೋದಿ ಹೇಳಿದ ಪರಿವಾರವಾದ ರಹಿತ, ಜಾತಿವಾದ ರಹಿತ ಭ್ರಷ್ಟಾಚಾರ ರಹಿತವಾದ ಪಕ್ಷ ರಾಜ್ಯದಲ್ಲಿ ಇರಬೇಕು ಎಂದು ಹೇಳಿರುವ ಸದಾನಂದ ಗೌಡ, ಬಿಜೆಪಿ ಶುದ್ದೀಕರಣಕ್ಕೆ ನಿರಂತರವಾದ ಹೋರಾಟ ನಾನು ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ಇದೇ ವೇಳೆ, ಎನ್ ಡಿಎಗೆ ಜೆಡಿಎಸ್ ಸೇರ್ಪಡೆ ಆಗಿರುವುದನ್ನು ಸ್ವಾಗತಿಸಿದ ಡಿವಿಎಸ್, ಈ ಸಂದರ್ಭದಲ್ಲಿ ಪಕ್ಷಕ್ಕೆ ಜೀವ ತೇಯ್ದವರನ್ನು ಕಡೆಗಣಿಸಬಾರದು, ನನ್ನ ಎಲ್ಲಾ ಮಾತುಗಳೂ ಕರ್ನಾಟಕ ಬಿಜೆಪಿಗೆ ಸೀಮಿತವಾಗಿದ್ದು ನಾನೊಬ್ಬ ಕನ್ನಡಿಗನಾಗಿ ಮಾತಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಬಿಜೆಪಿ ಶುದ್ದೀಕರಣ ಮಾಡುವವರೆಗೆ ನಾನು ವಿರಮಿಸುವುದಿಲ್ಲ ಎಂದು ಘೋಷಿಸಿರುವ ಸದಾನಂದ ಗೌಡ, ಸ್ಫರ್ಧೆ ಮಾಡಿ ಅಂತಾ ನನ್ನ ಆರತಿ ಮಾಡಿ ಕರೆದುಕೊಂಡು ಬಂದು ಮಂಗಳಾರತಿ ಮಾಡಿ ಹೊರಗೆ ಕಳುಹಿಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಬಿಜೆಪಿ ರಾಜ್ಯ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

- Advertisement -

Latest News

error: Content is protected !!