Sunday, June 30, 2024
Homeತಾಜಾ ಸುದ್ದಿಲೋಕಸಭಾ ಚುನಾವಣಾ ಸೋಲಿಗೆ ರಾಜೀನಾಮೆ ಕೊಡುವುದಿಲ್ಲ; ದ.ಕ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿಕೆ

ಲೋಕಸಭಾ ಚುನಾವಣಾ ಸೋಲಿಗೆ ರಾಜೀನಾಮೆ ಕೊಡುವುದಿಲ್ಲ; ದ.ಕ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಹೇಳಿಕೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲು ಉಂಟಾಗಿರುವ ಹಿನ್ನೆಲೆಯಲ್ಲಿ ತಾನು ರಾಜೀನಾಮೆ ಕೊಡುವುದಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.‌ ಹರೀಶ್ ಕುಮಾರ್ ಹೇಳಿದ್ದಾರೆ.

ಸೋಲಿನ ಹೊಣೆ ಹೊತ್ತು ರಾಜೀನಾಮೆ ನೀಡುವಂತೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆದಿರುವ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಹರೀಶ್ ಕುಮಾರ್, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಯಾರೋ ರಾಜೀನಾಮೆ ಕೇಳಿದರು ಎಂದು ರಾಜೀನಾಮೆ ನೀಡಲು ಸಾಧ್ಯವಿಲ್ಲ, ಪಕ್ಷ ಸೋತಿತು ಎಂದು ರಾಜೀನಾಮೆ ನೀಡಿ ಓಡಿ ಹೋಗುವುದಕ್ಕೆ ಆಗುವುದಿಲ್ಲ ಎಂದು ಹೇಳಿರುವ ಹರೀಶ್ ಕುಮಾರ್, ಮನೆಯಲ್ಲಿ ಕುಳಿತವನನ್ನು ಜಿಲ್ಲಾಧ್ಯಕ್ಷ ಮಾಡಿಲ್ಲ ಎಂದು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಅಲ್ಲದೇ, ನನ್ನನ್ನು ಜಿಲ್ಲಾಧ್ಯಕ್ಷನನ್ನಾಗಿ ನೇಮಕ ಮಾಡಿದವರಿಗೆ ನಿರ್ಧಾರ ತೆಗೆದುಕೊಳ್ಳುವ ಅರಿವಿದೆ ಎಂದಿರುವ ಹರೀಶ್ ಕುಮಾರ್, ಪಕ್ಷದ ಜವಾಬ್ದಾರಿಯುತ ವ್ಯಕ್ತಿಗಳು ರಾಜೀನಾಮೆ ಕೇಳಿದರೆ ಮಾತ್ರ ಕೊಡಬಹುದು ಎಂದು ತಿಳಿಸಿದ್ದಾರೆ

- Advertisement -
spot_img

Latest News

error: Content is protected !!