Friday, August 28, 2026
Homeಕರಾವಳಿಉಡುಪಿಉಡುಪಿಯಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ!

ಉಡುಪಿಯಲ್ಲಿ ಭಾರತ್ ಬಂದ್ ಗೆ ನೀರಸ ಪ್ರತಿಕ್ರಿಯೆ!

- Advertisement -
- Advertisement -

ಉಡುಪಿ: ರೈತ ಸಂಘಟನೆಗಳು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿ ಕರೆ ನೀಡಿರುವ ಬಂದ್ ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಉಡುಪಿಯಲ್ಲಿ ವ್ಯಾಪಾರ ವಹಿವಾಟು ಯಥಾಸ್ಥಿತಿಯಲ್ಲಿ ಮುಂದುವರಿದಿದ್ದು, ಖಾಸಗಿ, ಸಿಟಿ, ಸರ್ವಿಸ್, ಕೆಎಸ್ ಆರ್‌ಟಿಸಿ ಬಸ್ ಸಂಚಾರ ಅಬಾಧಿತವಾಗಿದೆ.ತರಕಾರಿ, ದಿನಸಿ ಅಂಗಡಿಗಳಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಸಾಗುತ್ತಿದೆ.

ಇಂದಿನ ಬಂದ್ ಗೆ ಕೆಲವೊಂದು ಸಂಘಟನೆಗಳು ಬೆಂಬಲ ನೀಡಿದ್ದು, ಸಿಐಟಿಯು ನೇತೃತ್ವದಲ್ಲಿ ಇಂದು ಬೆಳಿಗ್ಗೆ ಉಡುಪಿಯಲ್ಲಿ ಪ್ರತಿಭಟನೆ ಜಾಥಾ ನಡೆಯಲಿದೆ. ಹೀಗಾಗಿ ನಗರ ಭಾಗದಲ್ಲಿ ಜನ ಸೇರದಂತೆ‌ ಪೋಲಿಸ್ ಸಿಬ್ಬಂದಿಗಳ ನಿಯೋಜನೆ ಮಾಡಲಾಗಿದೆ.

- Advertisement -

Latest News

error: Content is protected !!