Sunday, May 5, 2024
Homeತಾಜಾ ಸುದ್ದಿಎಸ್‌ಎಸ್‌ಎಲ್ಸಿ ಪರೀಕ್ಷೆ : ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ ಪರೀಕ್ಷೆ ಇಲ್ಲ

ಎಸ್‌ಎಸ್‌ಎಲ್ಸಿ ಪರೀಕ್ಷೆ : ಕ್ವಾರಂಟೈನ್ ನಲ್ಲಿರುವವರ ಮಕ್ಕಳಿಗೆ ಪರೀಕ್ಷೆ ಇಲ್ಲ

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕದಲ್ಲಿ ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು ಮತ್ತು ಜೊತೆಗೆ ವಾಸಿಸುತ್ತಿರುವ ಹತ್ತಿರದ ಸಂಬಂಧಿಕರು ಕೊರೊನ ಕಾರಣದಿಂದ ಕ್ವಾರಂಟೈನ್ ನಲ್ಲಿದ್ದರೆ ಅಂತಹ ಮಕ್ಕಳಿಗೆ ಪರೀಕ್ಷೆಗೆ ಬರೆಯಲು ಅವಕಾಶ ಇರುವುದಿಲ್ಲ.
ಕ್ವಾರಂಟೈನ್ ನಲ್ಲಿ ಇರುವವರ ಮಕ್ಕಳಿಗೆ ಪೂರಕ ಪರೀಕ್ಷೆಯಲ್ಲಿ ಅಂತಹ ಮಕ್ಕಳಿಗೆ ಅವಕಾಶ ನೀಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್. ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಪರೀಕ್ಷೆಗೆ ಮೂರು ದಿನದವರೆಗೂ ಪರೀಕ್ಷಾ ಕೇಂದ್ರಗಳ ಬದಲಾವಣೆ ಆಯ್ಕೆಯ ಅವಕಾಶ ಇಟ್ಟುಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ನೂಕು ನುಗ್ಗಲು ತಡೆಯುವ ಉದ್ದೇಶದಿಂದ ಎಲ್ಲ ಸಿಬ್ಬಂದಿ ಬೆಳಗ್ಗೆ 7 ಗಂಟೆಗೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಿ ಮಕ್ಕಳ ತಪಾಸಣೆ ನಡೆಸಿ ಪರೀಕ್ಷಾ ಕೊಠಡಿಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದ್ದಾರೆ

- Advertisement -
spot_img

Latest News

error: Content is protected !!