Wednesday, May 1, 2024
Homeತಾಜಾ ಸುದ್ದಿಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಯಿಲ್ಲ : ಡಿಸಿಎಂ ‌ಅಶ್ವತ್ಥನಾರಾಯಣ ಸ್ಪಷ್ಟನೆ

ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಯಿಲ್ಲ : ಡಿಸಿಎಂ ‌ಅಶ್ವತ್ಥನಾರಾಯಣ ಸ್ಪಷ್ಟನೆ

spot_img
- Advertisement -
- Advertisement -

ಬೆಂಗಳೂರು: ಕೋವಿಡ್‌ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಸಂಸ್ಕೃತ ವಿಶ್ವವಿದ್ಯಾಲಯದ 8ನೇ ಘಟಿಕೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು; “ವಿಶ್ವವಿದ್ಯಾಲಯದ ಮಟ್ಟದಲ್ಲಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಎಂಜಿನಿಯರಿಂಗ್‌, ಡಿಪ್ಲೋಮೋ ಸೇರಿದಂತೆ ಉನ್ನತ ಶಿಕ್ಷಣ ವ್ಯಾಪ್ತಿಗೆ ಬರುವ ಯಾವುದೇ ವಿಭಾಗದ ಪರೀಕ್ಷೆಗಳು ಯಥಾವತ್‌ ನಡೆಯುತ್ತವೆ. ಯಾವ ಬದಲಾವಣೆಯೂ ಇರುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಮುಂದಿನ ವರ್ಷ, ಅಂದರೆ; 2021-22 ನೇ ಸಾಲಿನ ಶೈಕ್ಷಣಿಕ ವರ್ಷದ ಯಾವ ಚಟುವಟಿಕೆಗಳಲ್ಲೂ ವ್ಯತ್ಯಯ ಆಗುವುದಿಲ್ಲ. ಈಗ ಪರೀಕ್ಷೆಗಳು ಮುಗಿದ ನಂತರ ಬೇಸಿಗೆ ರಜೆಗಳು ಇರುವುದಿಲ್ಲ. ಹಿಂದೆಯೇ ತರಗತಿಗಳು ಆರಂಭವಾಗುತ್ತವೆ. ಅದರಲ್ಲಿ ಆಫ್‌ಲೈನ್‌ ಮತ್ತು ಆನ್‌ಲೈನ್‌ ತರಗತಿಗಳು ಇರುತ್ತವೆ. ಮೊದಲು ಆನ್‌ಲೈನ್‌ ತರಗತಿಗಳು ಆರಂಭವಾಗುತ್ತವೆ. ವಿದ್ಯಾರ್ಥಿಗಳು ಎರಡರ ಪೈಕಿ ಒಂದಕ್ಕೆ ಕಡ್ಡಾಯವಾಗಿ ಹಾಜರಾಗಬೇಕಾಗುತ್ತದೆ ಎಂದಿದ್ದಾರೆ.

ಯಾರು ಕಾಲೇಜಿಗೆ ಬರುತ್ತಾರೋ ಅವರ ಸುರಕ್ಷತೆಗೆ ಕಾಲೇಜಿನಲ್ಲಿ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಕೋವಿಡ್‌ ಮಾರ್ಗಸೂಚಿ ಪ್ರಕಾರ ಎಲ್ಲ ವ್ಯವಸ್ಥೆ ಮಾಡಲಾಗಿರುತ್ತದೆ. ತರಗತಿ ಕೊಠಡಿಗಳ ಸ್ಯಾನಿಟೈಸೇಷನ್‌, ಸ್ವಚ್ಛತೆ, ಕೋವಿಡ್‌ ಪರೀಕ್ಷೆ, ದೈಹಿಕ ಅಂತರ ಹಾಗೂ ಮಾಸ್ಕ್‌ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

- Advertisement -
spot_img

Latest News

error: Content is protected !!