Friday, May 3, 2024
Homeಕರಾವಳಿನಾಳಿನ ಕರ್ನಾಟಕ ಬಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿಲ್ಲ ಬೆಂಬಲ; ಕಾರಣ ಏನ್ ಗೊತ್ತಾ?

ನಾಳಿನ ಕರ್ನಾಟಕ ಬಂದ ದಕ್ಷಿಣಕನ್ನಡ ಜಿಲ್ಲೆಯಲ್ಲಿಲ್ಲ ಬೆಂಬಲ; ಕಾರಣ ಏನ್ ಗೊತ್ತಾ?

spot_img
- Advertisement -
- Advertisement -

ಮಂಗಳೂರು: ಕಾವೇರಿ ನೀರು ಹಂಚಿಕೆ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ನಾಳೆ ವಿವಿಧ ಸಂಘಟನೆಗಳ ಕರ್ನಾಟಕ ಬಂದ್ ಗೆ ಕರೆ ನೀಡಿವೆ. ಆದರೆ ಈ ಬಂದ್ ಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯಾವ ಸಂಘಟನೆಗಳು ಬೆಂಬಲ ನೀಡಿಲ್ಲ.  ಜಿಲ್ಲೆಯ ಯಾವುದೇ ರಾಜಕೀಯ ಪಕ್ಷ, ಸಂಘಟನೆಗಳಾಗಲೀ ಬಂದ್‌ಗೆ ಬೆಂಬಲ ಸೂಚಿಸಿ ಯಾವುದೇ ಹೇಳಿಕೆಯನ್ನೂ ನೀಡಿಲ್ಲ.

ಹಾಗಾಗಿ ಖಾಸಗಿ ಬಸ್, ಆಟೋರಿಕ್ಷಾಗಳು ಎಂದಿನಂತೆ ಸಂಚರಿಸಲಿದೆ. ವ್ಯಾಪಾರಸ್ಥರು ಕೂಡಾ ಬಂದ್ ಮಾಡುವ ನಿಟ್ಟಿನಲ್ಲಿ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ದ.ಕ.ಜಿಲ್ಲಾ ಘಟಕ ಸೆ. 30ರಂದು ಮಧ್ಯಾಹ್ನ 1 ಗಂಟೆಗೆ ಇಲ್ಲಿನ ಮಿನಿ ವಿಧಾನಸೌಧ ಎದುರು ಪ್ರತಿಭಟನೆ ನಡೆಸುವುದಾಗಿ ಪ್ರಕಟನೆಯಲ್ಲಿ ತಿಳಿಸಿದೆ.

ವಿವಿಧ ಸಂಘಟನೆಗಳು ರಾಜ್ಯ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಸ್‌ಗಳು ಬಂದ್ ಮಾಡುವ ಯಾವುದೇ ನಿರ್ಧಾರ ಇಲ್ಲ. ಎಂದಿನಂತೆ ಸಂಚಾರ ನಡೆಸಲಿವೆ ಎಂದು ಸಿಟಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಅಝೀಝ್ ಪಾಪರ್ತಿಪಾಡಿ ತಿಳಿಸಿದ್ದಾರೆ.

ದ.ಕ ಜಿಲ್ಲೆಯಲ್ಲಿ ಶುಕ್ರವಾರ ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ, ಕೇವಲ ನೈತಿಕ ಬೆಂಬಲ ಮಾತ್ರ ನೀಡಲಾಗುವುದು. ಎತ್ತಿನಹೊಳೆ ವಿಚಾರದಲ್ಲಿ ಕನ್ನಡ ಸಂಘಟನೆಗಳ ಬೆಂಬಲ ಕೇಳಿದ್ದೆವು. ಆಗ ನೀರು ಎಲ್ಲರ ಹಕ್ಕು ಎಂದು ಹೇಳಿ ಬೆಂಬಲ ನೀಡಿಲ್ಲ. ತುಳು ಭಾಷೆ ವಿಚಾರದ ಹೋರಾಟದಲ್ಲಿ ನಮಗೆ ಬೆಂಬಲ ಸಿಕ್ಕಿಲ್ಲ, ತುಳು ಭಾಷೆ ಬಗ್ಗೆ ಚರ್ಚೆ ಆದಾಗ ಆ ಭಾಗದ ಶಾಸಕರು ತಮಾಷೆ ಮಾಡಿದ್ದರು. ಎತ್ತಿನ ಹೊಳೆ ಅವೈಜ್ಞಾನಿಕ ಎಂದು ಗೊತ್ತಿದ್ದರೂ ನಮ್ಮ ಹೋರಾಟಕ್ಕೆ ಬೆಂಬಲ ನೀಡಿಲ್ಲ. ಹೀಗಾಗಿ ಬಂದ್‌ಗೆ ನಮ್ಮ ನೈತಿಕ ಬೆಂಬಲ ಮಾತ್ರವೇ ಇದೆ. ಬಸ್‌ಗಳ ಓಡಾಟವೂ ಎಲ್ಲವೂ ಯಥಾಸ್ಥಿತಿಯಲ್ಲಿ ಇರಲಿದೆ ಎಂದು ಖಾಸಗಿ ಬಸ್ ಮಾಲೀಕರ ಸಂಘದ ಮಾಜಿ ಅಧ್ಯಕ್ಷ, ಸಾಮಾಜಿಕ ಹೋರಾಟಗಾರ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.

ಇನ್ನು ಎಂದಿನಂತೆ ಶಾಲಾ ಕಾಲೇಜುಗಳು ಕಾರ್ಯಾಚರಿಸಲಿವೆ. ಸರಕಾರಿ ಕಾಲೇಜುಗಳು ಕೂಡ ಸೆ.29ರಂದು ತೆರೆದಿರುತ್ತವೆ ಎಂದು ದ.ಕ.ಜಿಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!