Wednesday, June 24, 2026
Homeಕರಾವಳಿಆಶಾ ತಿಮ್ಮಪ್ಪ ಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಿದ ಹಿನ್ನೆಲೆ; ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

ಆಶಾ ತಿಮ್ಮಪ್ಪ ಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಿದ ಹಿನ್ನೆಲೆ; ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟ

- Advertisement -
- Advertisement -

ಪುತ್ತೂರು; ಆಶಾ ತಿಮ್ಮಪ್ಪ ಗೌಡ ಅವರಿಗೆ ಬಿಜೆಪಿ ಟಿಕೆಟ್ ನೀಡಿದ ಹಿನ್ನೆಲೆ ಪುತ್ತೂರು ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಹಿಂದೂ ಸಂಘಟನೆಯ ಮುಖಂಡ ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಸಲು ಮುಂದಾಗಿದ್ದಾರೆ.ಕಳೆದ ಎರಡು ಅವಧಿಯಲ್ಲಿ ಅರುಣ್ ಅವರ ಹೆಸರು ಅಭ್ಯರ್ಥಿ ಸ್ಥಾನಕ್ಕೆ ಕೇಳಿ ಬಂದಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರಿಗೆ ಅವಕಾಶ ನೀಡುವಂತೆ ಸಂಘ ಪರಿವಾರದ ಒಂದು ತಂಡ ತೀವ್ರ ಒತ್ತಡ ಹೇರಿತ್ತು.ಇದಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವೂ ನಡೆದಿತ್ತು.ಪುತ್ತಿಲ ಪರ ಹಲವೆಡೆ ಬ್ಯಾನರ್ ಗಳನ್ನು ಕೂಡ ಹಾಕಲಾಗಿತ್ತು.

ಬಿಜೆಪಿಯ ಸರ್ವೇಯಲ್ಲಿ ಅರುಣ್ ಹೆಸರು ಕೂಡ ಇತ್ತು ಎನ್ನಲಾಗಿದ್ದು ಹೀಗಾಗಿ ಈ ಬಾರಿ ಅರುಣ್ ಅವರಿಗೆ ಟಿಕೇಟ್ ಸಿಗುವ ನಿರೀಕ್ಷೆಯನ್ನು ಬೆಂಬಲಿಗರು ಹೊಂದಿದ್ದರು.ಅರುಣ್ ಪುತ್ತಿಲ ಅವರಿಗೆ ಟಿಕೆಟ್ ಸಿಗದ ಕಾರಣ ಅರುಣ್ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಕ್ಷೇತರರಾಗಿ ಕಣಕ್ಕಿಳಿಯುವಂತೆ ಒತ್ತಡ ಹೇರಲಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!