Saturday, May 18, 2024
Homeತಾಜಾ ಸುದ್ದಿಟಿಕೆಟ್ ಕೈ ತಪ್ಪಿದ್ದಕ್ಕೆ ಶಾಸಕ ರಾಮದಾಸ್ ಬೇಸರ; ಇಂದು ನಿರ್ಧಾರ ಪ್ರಕಟಿಸುತ್ತೇನೆಂದ ಬಿಜೆಪಿ ನಾಯಕ

ಟಿಕೆಟ್ ಕೈ ತಪ್ಪಿದ್ದಕ್ಕೆ ಶಾಸಕ ರಾಮದಾಸ್ ಬೇಸರ; ಇಂದು ನಿರ್ಧಾರ ಪ್ರಕಟಿಸುತ್ತೇನೆಂದ ಬಿಜೆಪಿ ನಾಯಕ

spot_img
- Advertisement -
- Advertisement -

ಮೈಸೂರು; ಕೃಷ್ಣರಾಜ ಕ್ಷೇತ್ರo  ಹಾಲಿ ಶಾಸಕ ಎಸ್​ಎ ರಾಮದಾಸ್​ಗೆ ಈ ಬಾರಿ ಬಿಜೆಪಿ  ಟಿಕೆಟ್ ಕೈತಪ್ಪಿದೆ.ಅಲ್ಲಿ ಹೊಸಮುಖ ಶ್ರೀವತ್ಸಗೆ ಪಕ್ಷ ಟಿಕೆಟ್ ನೀಡಲಾಗಿದೆ. ಇದು ರಾಮದಾಸ್​​ ಅಸಮಾಧಾನಕ್ಕೆ ಕಾರಣವಾಗಿದ್ದು, 30 ವರ್ಷದಿಂದ ಇದ್ದ ತಾಯಿ ಮನೆಯಿಂದ ಓಡಿಸಿದ್ದಾರೆ. ಈಗ ಆ ಮನೆಯಲ್ಲಿ ಇರಬೇಕಾ ಬೇಡವಾ ಎಂಬ ಬಗ್ಗೆ ಯೋಚಿಸಬೇಕಾಗಿದೆ ಎಂದು ಹೇಳಿದ್ದಾರೆ. ಆ ಮೂಲಕ ಬಿಜೆಪಿಗೆ ಮೈಸೂರಿನಲ್ಲೂ ಬಂಡಾಯದ ಬಿಸಿ ಮುಟ್ಟಿಸುವ ಸುಳಿವು ನೀಡಿದ್ದಾರೆ.

ಮೈಸೂರಿನ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷದಲ್ಲಿರಬೇಕೇ ಅಥವಾ ಬೇರೆ ಯಾವ ನಿರ್ಧಾರ ಕೈಗೊಳ್ಳಬೇಕು ಎಂಬುದಾಗಿ ನಾಳೆ ತಿಳಿಸುತ್ತೇನೆ, ನಾನು ಯಾರನ್ನೂ ಭೇಟಿ ಮಾಡುವುದಿಲ್ಲ ಎಂದು ಅವರು ಹೇಳಿದ್ದಾರೆ. ನಾಳೆ(ಅಂದೆರ ಇಂದು) ನಿಮ್ಮನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ ಎಂಬುದಾಗಿ ಸಂಸದ ಪ್ರತಾಪ್ ಸಿಂಹ ಹೇಳಿದ ಬೆನ್ನಲ್ಲೇ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ಈ ಮಧ್ಯೆ, ಪಕ್ಷದ ಟಿಕೆಟ್ ಪಡೆದಿರುವ ಶ್ರೀವತ್ಸ, ಸಂಸದ ಪ್ರತಾಪ್​ ಸಿಂಹ ಹಾಗೂ ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ ಅವರು ರಾಮದಾಸ್​ ನಿವಾಸಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ  ಮಾತನಾಡಿದ ಪ್ರತಾಪ್ ಸಿಂಹ, ಆಶೀರ್ವಾದ ಪಡೆಯಲು ರಾಮದಾಸ್ ಮನೆಗೆ ಬಂದಿದ್ದೆವು. ಟಿಕೆಟ್ ತಪ್ಪಿರುವ ಕಾರಣ ರಾಮದಾಸ್ ಅವರಿಗೆ ನೋವಾಗಿದೆ. 30 ವರ್ಷಗಳಿಂದ ಇದ್ದ ಅವಕಾಶ ಕೈ ತಪ್ಪಿದ ಕಾರಣ ರಾಮದಾಸ್ ಅವರಿಗೆ ಬೇಸರ ಆಗಿರುವುದು ಸಹಜ. ನಾಳೆ(ಇಂದು) ನಿಮ್ಮನ್ನು ಭೇಟಿ ಮಾಡುತ್ತೇನೆ, ಪಕ್ಷದ ಜೊತೆ ಇರುತ್ತೇನೆ ಎಂದು ದೂರವಾಣಿಯಲ್ಲಿ ಮಾಹಿತಿ ನೀಡಿದ್ದಾರೆ. ಪಕ್ಷವನ್ನು ತಾಯಿ ಎಂದು ಭಾವಿಸಿರುವವರು ತಾಯಿಯನ್ನು ಯಾವುದೇ ಕಾರಣಕ್ಕೂ ಬಿಟ್ಟು ಕೊಡುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!