Saturday, June 6, 2026
Homeತಾಜಾ ಸುದ್ದಿವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯರಾಗಿ ಉಮಾಶ್ರೀ, ಎಂ.ಆರ್. ಸೀತಾರಾಂ ಮತ್ತು ಸುಧಾಮ್ ದಾಸ್ ಪ್ರಮಾಣ...

ವಿಧಾನ ಪರಿಷತ್ ನಾಮ ನಿರ್ದೇಶಿತ ಸದಸ್ಯರಾಗಿ ಉಮಾಶ್ರೀ, ಎಂ.ಆರ್. ಸೀತಾರಾಂ ಮತ್ತು ಸುಧಾಮ್ ದಾಸ್ ಪ್ರಮಾಣ ವಚನ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ನ ನೂತನ ಸದಸ್ಯರಾಗಿ ಮಾಜಿ ಸಚಿವೆ ಉಮಾಶ್ರೀ, ಮಾಜಿ ಸಚಿವ ಎಂ.ಆರ್. ಸೀತಾರಾಮ್ ಮತ್ತು ನಿವೃತ್ತ ಇಡಿ ಅಧಿಕಾರಿ ಹೆಚ್.ಪಿ. ಸುಧಾಮ್ ದಾಸ್ ಅವರು ಪ್ರಮಾಣವಚನ ಸ್ವೀಕರಿಸಿದರು.

ವಿಧಾನಸೌಧದಲ್ಲಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಮೂವರು ನಾಮ ನಿರ್ದೇಶಿತ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಂಸದೀಯ ವ್ಯವಹಾರಗಳ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್, ವಿಧಾನ ಪರಿಷತ್ ಸಭಾ ನಾಯಕ ಮತ್ತು ಸಚಿವ ಎಸ್.ಎನ್. ಬೋಸರಾಜು ಸೇರಿದಂತೆ ಹಲವು ಶಾಸಕರುಗಳು ಉಪಸ್ಥಿತರಿದ್ದರು.ನೂತನ ಶಾಸಕರುಗಳ ಕುಟುಂಬ ಸದಸ್ಯರು ಮತ್ತು ಅಭಿಮಾನಿಗಳು ಕೂಡಾ ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement -

Latest News

error: Content is protected !!