ಮೈಸೂರು: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ. ಚೆಕ್ ಬೌನ್ಸ್ ಕೇಸ್ ನಲ್ಲಿ ಕೋರ್ಟ್ ಗೆ ಹಾಜರಾಗದ ಹಿನ್ನೆಲೆ ಸ್ನೇಹಮಯಿ ಕೃಷ್ಣ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಯಾಗಿದೆ.
ಮೈಸೂರಿನ ಕೋರ್ಟ್ ಗೆ ಚೆಕ್ ಬೌನ್ಸ್ ಕೇಸ್ ಸಂಬಂಧ ನಿನ್ನೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಹಾಜರಾಗಬೇಕಿತ್ತು. ಆದರೆ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದ ಕಾರಣ, ಕೋರ್ಟ್ ಮುಂದೆ ಹಾಜರಾಗಲು ಸಾಧ್ಯವಾಗಿರಲಿಲ್ಲ.ಈ ಹಿನ್ನಲೆಯಲ್ಲಿ ಚೆಕ್ ಬೌನ್ಸ್ ಪ್ರಕರಣದಲ್ಲಿ ಮುಡಾ ದೂರುದಾರ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವಂತ ಅವರು, ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾದ ಕಾರಣ ಕೋರ್ಟ್ ಗೆ ಹಾಜರಾಗಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಕೋರ್ಟ್ ಗೆ ಹಾಜರಾಗುತ್ತೇನೆ. ಜಾಮೀನು ರಹಿತ ವಾರೆಂಟ್ ರೀ ಕಾಲ್ ಮಾಡಿಸುವುದಾಗಿ ಸ್ಪಷ್ಟಪಡಿಸಿದ್ದಾರೆ.