Thursday, June 4, 2026
Homeತಾಜಾ ಸುದ್ದಿಮುರುಘಾ ಶರಣರಿಗೆ ಸಂಕಷ್ಟದ ಮೇಲೆ ಸಂಕಷ್ಟ; ಶ್ರೀಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಮುರುಘಾ ಶರಣರಿಗೆ ಸಂಕಷ್ಟದ ಮೇಲೆ ಸಂಕಷ್ಟ; ಶ್ರೀಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

- Advertisement -
- Advertisement -

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಮುರಘಾ ಶ್ರೀಗಳಿಗೆ ಒಂದರ ಮೇಲೆ ಒಂದು ಸಂಕಷ್ಟಗಳು ತಪ್ಪುತ್ತಿಲ್ಲ.

ಮುರುಘಾಶ್ರೀಗಳು ಮಠದ ಆಸ್ತಿಯನ್ನು ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 2013ರಲ್ಲಿ ಶ್ರೀಗಳ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು.

ಆನಂದ ಕುಮಾರ್ ಎಂಬ ವ್ಯಕ್ತಿಗೆ ಕೆಂಗೇರಿಯ ಸೂಲಿಕೆರೆ ಗ್ರಾಮದಲ್ಲಿನ ಮಠದ ಆಸ್ತಿಯಲ್ಲಿ 7.18 ಎಕರೆ ಜಾಗವನ್ನು ಅಕ್ರಮವಾಗಿ ಮಾರಾಟ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬವರು ವಂಚನೆ, ವಿಶ್ವಾಸದ್ರೋಹ ಪ್ರಕರಣ ದಾಖಲಿಸಿದ್ದರು. ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು.

ಸಮನ್ಸ್ ಜಾರಿ ಮಾಡಿದರೂ ಮುರುಘಾಶ್ರೀಗಳು ನ್ಯಾಯಾಲಯಕ್ಕೆ ಹಾಜರಾಗದ ಹಿನ್ನೆಲೆಯಲಿ ಇದೀಗ ಶ್ರೀಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.

- Advertisement -

Latest News

error: Content is protected !!