Thursday, June 4, 2026
Homeಕರಾವಳಿಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರನ್ನು ಮರು ನೇಮಕ ಮಾಡಲಾಗುವುದು; ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ...

ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರನ್ನು ಮರು ನೇಮಕ ಮಾಡಲಾಗುವುದು; ಟ್ವೀಟ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು; ಪಾಪಿಗಳಿಂದ ಕೊಲೆಯಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರು  ಹೊಸ  ಸರ್ಕಾರ ಬರುತ್ತಿದ್ದಂತೆ ಕೆಲಸ ಕಳೆದುಕೊಂಡಿದ್ದರು. ಈ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಇದೀಗ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಸಿದ್ದು ಟ್ವೀಟ್ ಮಾಡಿದ್ದಾರೆ

- Advertisement -

Latest News

error: Content is protected !!