- Advertisement -
- Advertisement -
ಬೆಂಗಳೂರು : ಸಿನಿಮಾ ನಿರ್ಮಾಪಕ, ವಿತರಕ, ಉದ್ಯಮಿ ಕಪಾಲಿ ಮೋಹನ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಗರದ ಪೀಣ್ಯ ಬಸವೇಶ್ವರ ಬಸ್ ನಿಲ್ದಾಣದ ಹತ್ತಿರದ ತಮ್ಮದೇ ಹೋಟೆಲ್ ಸುಪ್ರೀಂನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಡಾ.ರಾಜ್ ಕುಟುಂಬದೊಂದಿಗೆ ಸಾಕಷ್ಟು ಒಡನಾಟ ಇಟ್ಟುಕೊಂಡಿದ್ದಅವರು ನಿನ್ನೆ ಹೋಟೆಲ್ ನ ಲ್ಲಿಯೇ ತಂಗಿ ಇಂದು ಬೆಳಗ್ಗೆ ಶವವಾಗಿದ್ದಾರೆ.
ಎಂದಿನಂತೆ ಸಿಬ್ಬಂದಿ ಬಾಗಿಲು ತಟ್ಟಿದಾಗ ಎಚ್ಚರಗೊಳ್ಳದ್ದಕ್ಕೆ ಅನುಮಾನಗೊಂಡ ಸಿಬ್ಬಂದಿ ಕಿಟಕಿ ಒಡೆದು ನೋಡಿದಾಗ ಮೋಹನ್ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಕಳೆದ ಕೆಲವು ವರ್ಷಗಳಿಂದ ವ್ಯಾಪಾರದಲ್ಲಿ ತೊಂದರೆ, ನಷ್ಟ ಅನುಭವಿಸಿ ಮಾನಸಿಕವಾಗಿ ನೊಂದಿದ್ದರು ಎಂದು ಆಪ್ತ ವಲಯ ಮಾಹಿತಿ ನೀಡಿದೆ. ಘಟನಾ ಸ್ಥಳಕ್ಕೆ ಗಂಗಮ್ಮನಗುಡಿ ಪೊಲೀಸರ ಭೇಟಿ,ಪರಿಶೀಲನೆ ನಡೆಸುತ್ತಿದ್ದಾರೆ. ಇನ್ನೂ ಆತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
- Advertisement -
