Thursday, June 4, 2026
Homeಕರಾವಳಿಪುತ್ತೂರು ; ಹಿಂದೂ ಕಾರ್ಯಕರ್ತ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ನೋಟಿಸ್

ಪುತ್ತೂರು ; ಹಿಂದೂ ಕಾರ್ಯಕರ್ತ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ನೋಟಿಸ್

- Advertisement -
- Advertisement -

ಪುತ್ತೂರು ; ಹಿಂದೂ ಕಾರ್ಯಕರ್ತ ಪುತ್ತೂರು ತಾಲೂಕಿನ ಪುರುಷರಕಟ್ಟೆಯ ಅವಿನಾಶ್ ಪುರುಷರಕಟ್ಟೆ ಗಡಿಪಾರಿಗೆ ನೋಟಿಸ್ ನೀಡಲಾಗಿದೆ. ಉಪ್ಪಿನಂಗಡಿ ಗ್ರಾಮಾಂತರ ಪೊಲೀಸ್ ಠಾಣೆಯಿಂದ ನೋಟಿಸ್ ನೀಡಲಾಗಿದೆ.


ಇನ್ನು ನಾಳೆ ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯಕ್ಕೆ ಹಾಜರಾಗುವಂತೆ ತಿಳಿಸಲಾಗಿದೆ. ನಾಳೆ ಅವಿನಾಶ್ ವಿಚಾರಣೆಗೆ ಹಾಜರಾಗದಿದ್ದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಿಂದ ಬೀದರ್​ಗೆ ಗಡಿಪಾರು ಮಾಡುವುದಾಗಿ ನೋಟಿಸ್​ನಲ್ಲಿ ತಿಳಿಸಲಾಗಿದೆ.

 ಈ ಪ್ರಕರಣದಲ್ಲಿ ನೀವು ಸ್ವತಃ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ತಿಳಿಸಲಾಗಿದೆ. ತಪ್ಪಿದಲ್ಲಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೆಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ

- Advertisement -

Latest News

error: Content is protected !!