Wednesday, April 24, 2024
Homeಕೊಡಗುಕೊಡಗು; ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ; ವಾಟ್ಸಾಪ್ ಗ್ರೂಪ್‌ನ ಅಡ್ಮಿನ್‌ ಗೆ ಚುನಾವಣಾ ಅಧಿಕಾರಿಯಿಂದ...

ಕೊಡಗು; ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ; ವಾಟ್ಸಾಪ್ ಗ್ರೂಪ್‌ನ ಅಡ್ಮಿನ್‌ ಗೆ ಚುನಾವಣಾ ಅಧಿಕಾರಿಯಿಂದ ನೋಟಿಸ್ ಜಾರಿ

spot_img
- Advertisement -
- Advertisement -

ಕೊಡಗು; ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆ ವಾಟ್ಸಾಪ್ ಗ್ರೂಪ್‌ನ ಅಡ್ಮಿನ್‌ ಗೆ ಚುನಾವಣಾ ಅಧಿಕಾರಿಯಿಂದ ನೋಟಿಸ್ ಜಾರಿಯಾಗಿರುವ ಘಟನೆ ಕೊಡಗಿನ ಕುಶಾಲನಗರದಲ್ಲಿ ನಡೆದಿದೆ.

ಕೊಡಗು ಜಿಲ್ಲೆಯ ಕುಶಾಲನಗರದ ವಿ.ಪಿ.ಶಶಿಧರ್ ಎಂಬವರಿಗೆ ಮಡಿಕೇರಿ ಕ್ಷೇತ್ರದ ಚುನಾವಣಾಧಿಕಾರಿ ಜಾರಿ ಮಾಡಿದ್ದಾರೆ ಎನ್ನಲಾದ ನೊಟೀಸ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನೊಟೀಸ್ ನಲ್ಲಿ ನೀವು ಅಡ್ಮಿನ್ ಆಗಿರುವ ‘ನಮ್ಮ ಕುಶಾಲನಗರ’ ವಾಟ್ಸಾಪ್ ಗ್ರೂಪ್‌ನ ಮೂಲಕ ಯಾವುದೇ ಪೂರ್ವ ಅನುಮತಿ ಪಡೆಯದೆ ರಾಜಕೀಯ ಪ್ರೇರಿತ ಹೇಳಿಕೆಯ ವೀಡಿಯೊ ತುಣುಕನ್ನು ಹಂಚಿಕೊಂಡಿರುವುದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿರುತ್ತದೆ ಎಂದು ಚುನಾವಣಾಧಿಕಾರಿ ಉಲ್ಲೇಖಿಸಿದ್ದಾರೆ.

ಮಾದರಿ ನೀತಿ ಸಂಹಿತೆ ಉಲ್ಲಂಘಿಸಿರುವ ಬಗ್ಗೆ ಪ್ರಜಾಪ್ರತಿನಿಧಿ ಕಾಯ್ದೆ 1951ರ ಆಧಾರದಲ್ಲಿ ನಿಮ್ಮ ಮೇಲೆ ಏಕೆ ಕಾನೂನು ಕ್ರಮ ಜರುಗಿಸಬಾರದು ಎಂಬುದಕ್ಕೆ ಈ ನೋಟಿಸ್ ತಲುಪಿದ 24 ಗಂಟೆಯೊಳಗಾಗಿ ಖುದ್ದು ಲಿಖಿತ ಉತ್ತರ ನೀಡುವಂತೆ ಸೂಚಿಸಲಾಗಿದೆ.

- Advertisement -
spot_img

Latest News

error: Content is protected !!