Monday, June 8, 2026
Homeಅಪರಾಧಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ‌ ಪ್ರಕರಣ;ಮಾನಸ ಗಂಗೋತ್ರಿ ಕುಲಸಚಿವರಿಂದ ದಂಪತಿಗಳಿಗೆ ನೋಟಿಸ್ ಜಾರಿ!

ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಆರೋಪ‌ ಪ್ರಕರಣ;ಮಾನಸ ಗಂಗೋತ್ರಿ ಕುಲಸಚಿವರಿಂದ ದಂಪತಿಗಳಿಗೆ ನೋಟಿಸ್ ಜಾರಿ!

- Advertisement -
- Advertisement -

ಮೈಸೂರು: ಪಿಹೆಚ್.ಡಿ. ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಧ್ಯಾಪಕ ದಂಪತಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ ದಂಪತಿಗೆ ಮೈಸೂರು ವಿವಿ ಕುಲಸಚಿವ ಪ್ರೊ.ಶಿವಪ್ಪರಿಂದ ನೋಟೀಸ್ ಜಾರಿಗೊಳಿಸಿದ್ದಾರೆ.

ಮೈಸೂರು ವಿವಿ ಮಾನಸ ಗಂಗೋತ್ರಿಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಜಿ.ಟಿ. ರಾಮಚಂದ್ರಪ್ಪ ಹಾಗೂ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಪ್ರಾಧ್ಯಾಪಕಿ ಡಾ. ಎನ್.ಕೆ. ಲೋಲಾಕ್ಷಿ ಅವರಿಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿ ಆಧರಿಸಿ ನೋಟಿಸ್ ನೀಡಲಾಗಿದೆ.

ಮೈಸೂರು ವಿವಿ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಅವರ ನಿರ್ದೇಶನದ ಮೇರೆಗೆ ಕುಲಸಚಿವ ಪ್ರೊ. ಶಿವಪ್ಪ ಅವರು ಘಟನೆಗೆ ಸಂಬಂಧಿಸಿದಂತೆ ಮಾಹಿತಿ ನೀಡಲು ಇಬ್ಬರು ಪ್ರಾಧ್ಯಾಪಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ನಂತರ ಇಬ್ಬರೂ ದಂಪತಿಗಳ ಹೇಳಿಕೆ ಆಧರಿಸಿ ಮುಂದಿನ ಕ್ರಮ ಜರುಗಿಸುವ ಸಾಧ್ಯತೆ ಇದೆ.

- Advertisement -

Latest News

error: Content is protected !!