Sunday, May 19, 2024
Homeತಾಜಾ ಸುದ್ದಿನೂಪುರ್‌ ಶರ್ಮಾರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್:‌ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಸೂಚನೆ

ನೂಪುರ್‌ ಶರ್ಮಾರನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್:‌ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಸೂಚನೆ

spot_img
- Advertisement -
- Advertisement -

ನವದೆಹಲಿ:ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ನೀಡಿರುವ ಹೇಳಿಕೆ ದೇಶಾದ್ಯಂತ ತೀವ್ರ ವಿವಾದಕ್ಕೆಡೆ ಮಾಡಿಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಬಿಜೆಪಿಯಿಂದ ಅಮಾನತುಗೊಂಡಿದ್ದ ನೂಪುರ್ ಶರ್ಮಾ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಟೆಲಿವಿಷನ್ ಮೂಲಕ ನೂಪುರ್ ಇಡೀ ದೇಶದ ಕ್ಷಮೆಯಾಚಿಸಬೇಕು ಎಂದು ತಿಳಿಸಿದೆ.

ಪ್ರವಾದಿ ಪೈಗಂಬರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಎಲ್ಲಾ ಎಫ್ ಐಆರ್ ಗಳನ್ನು ತನಿಖೆಗಾಗಿ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ನೂಪುರ್ ಶರ್ಮಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ನಿಮ್ಮ (ನೂಪುರ್) ಹೇಳಿಕೆಯಿಂದ ದೇಶದ ಭದ್ರತೆಗೆ ಧಕ್ಕೆ ಬಂದಿದೆ ಎಂದು ಹೇಳಿದ್ದು, ಆಕೆಯ ಮನವಿಯನ್ನು ವಜಾಗೊಳಿಸಿ, ಯಾವುದೇ ಪರಿಹಾರ ಬೇಕಿದ್ದರು ಹೈಕೋರ್ಟ್ ಮೆಟ್ಟಿಲೇರುವಂತೆ ಸೂಚಿಸಿದೆ.

ಈ ಅರ್ಜಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಲ್ಲಿಸಿ, ಹಾಜರಾಗಲು ಯೋಗ್ಯವಾಗಿಲ್ಲ ಎಂದು ಆಕೆ ಭಾವಿಸಿದಂತಿದೆ ಎಂದು ಸುಪ್ರೀಂಕೋರ್ಟ್ ಪೀಠ ಅಭಿಪ್ರಾಯ ವ್ಯಕ್ತಪಡಿಸಿದೆ. ಪಕ್ಷದ ವಕ್ತಾರರಾದವರು ಇಂತಹ ಹೇಳಿಕೆಗಳನ್ನು ನೀಡಬಾರದು. ಕೆಲವೊಮ್ಮೆ ಅಧಿಕಾರ ಎನ್ನುವುದು ಜನರ ತಲೆಗೆ ಏರುತ್ತದೆ. ಇದರಿಂದ ತಾವೇ ಸರ್ವಸ್ವ ಎಂದು ಭಾವಿಸುತ್ತಾರೆ. ಇಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ನೂಪುರ್ ವಿರುದ್ಧ ಪ್ರಕರಣ ಯಾಕೆ ದಾಖಲಿಸಿಲ್ಲ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ.

- Advertisement -
spot_img

Latest News

error: Content is protected !!