Thursday, May 2, 2024
Homeಕರಾವಳಿಲೋಕಸಭೆ ಚುನಾವಣೆ ಹಿನ್ನೆಲೆ ಕ್ಷೇತ್ರದ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾಕ್ಕೆ ಸೂಚನೆ

ಲೋಕಸಭೆ ಚುನಾವಣೆ ಹಿನ್ನೆಲೆ ಕ್ಷೇತ್ರದ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾಕ್ಕೆ ಸೂಚನೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಕುರಿತಂತೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ರಾಜ್ಯಕ್ಕೆ ನಿಯೋಜನೆಗೊಂಡ ವಿಶೇಷ ವೆಚ್ಚ ವೀಕ್ಷಕ ಬಿ. ಮುರಳಿ ಕುಮಾರ್ ಅಧಿಕಾರಿಗಳ ಸಭೆ ನಡೆಸಿ, ‘ಮುಕ್ತ ಹಾಗೂ ಪಾರದರ್ಶಕ ಚುನಾವಣೆಗೆ ಮಾದರಿ ನೀತಿ ಸಂಹಿತೆಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು. ಪ್ರತಿಯೊಂದು ಘಟನೆಯನ್ನು ಸೂಕ್ಷ್ಮವಾಗಿ ಗಮನಿಸಿ ಅಭ್ಯರ್ಥಿಗಳ ವೆಚ್ಚದ ಬಗ್ಗೆ ನಿಗಾವಹಿಸಬೇಕು,’ ಎಂದು ನಿರ್ದೇಶನ ನೀಡಿದರು.

ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ವೆಚ್ಚಗಳ ಬಗ್ಗೆ ವಿಶೇಷ ನಿಗಾವಹಿಸುವಂತೆ ಹಾಗೂ ಅವರ ಶ್ಯಾಡೋ ರಿಜಿಸ್ಟರ್ ಅನ್ನು ಸೂಕ್ತವಾಗಿ ನಿರ್ವಹಿಸುವಂತೆ ಮತ್ತು ಕಾಲಕಾಲಕ್ಕೆ ಪರಿಶೀಲಿಸುವಂತೆ ಸೂಚಿಸಿದರು. ಚುನಾವಣಾ ಅವಧಿಯಲ್ಲಿ ಅನುಮಾನಾಸ್ಪದ ವ್ಯವಹಾರಗಳ ಬಗ್ಗೆ ಎಚ್ಚರ ವಹಿಸಬೇಕು, ಪ್ರತಿನಿತ್ಯ ಕ್ರಮಬದ್ದ ವ್ಯವಹಾರಗಳ ಬಗ್ಗೆ ಬ್ಯಾಂಕ್‌ಗಳಿಂದ ಖಾತ್ರಿ ಪಡಿಸಿಕೊಳ್ಳಬೇಕು. ವಿಮಾನ ನಿಲ್ದಾಣ ಹಾಗೂ ಬಂದರು ತಪಾಸಣೆ ಬಗ್ಗೆ ವಿಶೇಷ ನಿಗಾ ವಹಿಸಬೇಕು. ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ತೀವ್ರಗೊಳಿಸಬೇಕು, ಅಭ್ಯರ್ಥಿಗಳಿಗೆ ಚುನಾವಣಾ ವೆಚ್ಚ ₹95 ಲಕ್ಷ ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ಹಾಗೆಯೇ ಗಡಿಪಾರು ಮಾಡಿರುವ ರೌಡಿ ಶೀಟರ್‌ಗಳ ಮೇಲೆ ನಿಗಾವಹಿಸುವಂತೆಯೂ ಸೂಚಿಸಿದರು.

ಚುನಾವಣಾ ವೆಚ್ಚವೀಕ್ಷಕ ಮೆರುಗು ಸುರೇಶ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್, ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ಸಿ.ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಸಂತೋಷ್ ಕುಮಾರ್, ಪ್ರೊಬೆಷನರಿ ಐಎಎಸ್ ಅಧಿಕಾರಿ ಮುಕುಲ್ ಜೈನ್, ಚುನಾವಣಾ ಖರ್ಚು ವೆಚ್ಚಗಳ ನಿರ್ವಹಣೆಯ ನೋಡಲ್ ಅಧಿಕಾರಿ ಮೀರಾ ಪಂಡಿತ್, ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

- Advertisement -
spot_img

Latest News

error: Content is protected !!