Tuesday, May 14, 2024
Homeತಾಜಾ ಸುದ್ದಿಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ 'ಗುಡ್ ನ್ಯೂಸ್'- 'ರಾಷ್ಟ್ರೀಯ ನೇಮಕಾತಿ ಸಂಸ್ಥೆ' ಸ್ಥಾಪಿಸಲು ಕೇಂದ್ರ...

ಉದ್ಯೋಗಾಕಾಂಕ್ಷಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’- ‘ರಾಷ್ಟ್ರೀಯ ನೇಮಕಾತಿ ಸಂಸ್ಥೆ’ ಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ಒಪ್ಪಿಗೆ

spot_img
- Advertisement -
- Advertisement -

ನವದೆಹಲಿ: ದೇಶದಲ್ಲಿನ ವಿವಿಧ ಸರ್ಕಾರಿ ಉದ್ಯೋಗಗಳಿಗೆ ಒಂದೇ ಸಾಮಾನ್ಯ ಅರ್ಹತಾ ಪರೀಕ್ಷೆ ಹಾಗೂ ರಾಷ್ಟ್ರೀಯ ನೇಮಕಾತಿ ಪ್ರಾಧಿಕಾರ ರಚನೆಗೆ ಕೇಂದ್ರ ಸಚಿವ ಸಂಪುಟ ಇಂದು ಅನುಮೋದನೆ ನೀಡಿದೆ. ಉದ್ಯೋಗಾಕಾಂಕ್ಷಿಗಳಿಗೆ ಇದರಿಂದ ಭಾರಿ ಅನುಕೂಲವಾಗಲಿದೆ.

ಕೇಂದ್ರ ಸರ್ಕಾರದ ಉದ್ಯೋಗಗಳಿಗೆ ಕಂಪ್ಯೂಟರ್ ಆಧಾರಿತ ಸಾಮಾನ್ಯ ಅರ್ಹತಾ ಪರೀಕ್ಷೆಯನ್ನು ನಡೆಸಲಿರುವ ರಾಷ್ಟ್ರೀಯ ನೇಮಕಾತಿ ಸಂಸ್ಥೆ (ಎನ್‌ಆರ್‌ಎ) ರಚನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ.

ಗ್ರೂಪ್-ಬಿ, ಸಿ ಹಾಗೂ ನಾನ್ ಗೆಜೆಟೆಡ್ ಹುದ್ದೆಗಳಿಗೆ ಒಂದೇ ಪ್ರವೇಶ ಪರೀಕ್ಷೆಯನ್ನು ನಡೆಸಲಿದ್ದು, ಈ ಪರೀಕ್ಷೆಯಲ್ಲಿ ಪಾಸ್ ಆದವರಿಗೆ ಮುಂದಿನ ಹಂತದ ನೇಮಕಾತಿಗೆ ಅರ್ಹತೆ ನೀಡಲಾಗುವುದು ಎಂದು ಹೇಳಲಾಗಿದೆ.

ರಾಷ್ಟ್ರೀಯ ನೇಮಕಾತಿ ಪ್ರಾಧಿಕಾರ ಸ್ವಾಯತ್ತ ಸಂಸ್ಥೆಯಾಗಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಸರಳಗೊಳಿಸುವುದು ಸೇರಿ ಉದ್ಯೋಗಾಕಾಂಕ್ಷಿಗಳು ಎದುರಿಸುತ್ತಿರುವ ಹಲವು ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಮುಖ್ಯವಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ವಿಳಂಬ, ಅಕ್ರಮ ಹಾಗೂ ಮಹಿಳಾ ಆಕಾಂಕ್ಷಿಗಳ ಸಂಖ್ಯೆ ಕಡಿಮೆಯಾಗಿರುವುದು ಸೇರಿ ಹಲವು ಅಡಚಣೆಗಳಿಗೆ ಪರಿಹಾರ ಕಂಡುಕೊಳ್ಳಲಿದೆ.

ವಿವಿಧ ಸರ್ಕಾರಿ ಸಂಸ್ಥೆಗಳು, ನೇಮಕಾತಿ ಪ್ರಾಧಿಕಾರಗಳು ಪ್ರತ್ಯೇಕ ಪರೀಕ್ಷೆಗಳನ್ನು ನಡೆಸುವ ಬದಲು, ಒಂದೇ ಸಾಮಾನ್ಯ ಅರ್ಹತಾ ಅಥವಾ ಪ್ರವೇಶ ಪರೀಕ್ಷೆ ಇರಲಿದೆ. ಇದರ ಫಲಿತಾಂಶ ಮೂರು ವರ್ಷಗಳವರೆಗೆ ಮಾನ್ಯತಾ ಅವಧಿ ಹೊಂದಿರುತ್ತದೆ. ಎಷ್ಟು ಬಾರಿಯಾದರೂ ಈ ಪರೀಕ್ಷೆ ಎದುರಿಸಬಹುದು. ಜತೆಗೆ, ಎಲ್ಲ ಆಕಾಂಕ್ಷಿಗಳಿಗೆ ಒಂದೇ ನೋಂದಣಿ ಪೋರ್ಟಲ್​ ಇರಲಿದೆ. ಇದು ಸಮಯವನ್ನಷ್ಟೇ ಅಲ್ಲದೇ, ಹಣವನ್ನು ಉಳಿಸಲಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

- Advertisement -
spot_img

Latest News

error: Content is protected !!