Wednesday, June 24, 2026
Homeಕರಾವಳಿಫೆ.9ರಿಂದ 12ರ ತನಕ ನರೇಗಾ ಬಚಾವೋ ಸಂಗ್ರಾಮದ ಪಾದಯಾತ್ರೆ; ಮಾಜಿ ಸಚಿವ ಬಿ.ರಮಾನಾಥ ರೈಯಿಂದ ಪಾದಯಾತ್ರೆ...

ಫೆ.9ರಿಂದ 12ರ ತನಕ ನರೇಗಾ ಬಚಾವೋ ಸಂಗ್ರಾಮದ ಪಾದಯಾತ್ರೆ; ಮಾಜಿ ಸಚಿವ ಬಿ.ರಮಾನಾಥ ರೈಯಿಂದ ಪಾದಯಾತ್ರೆ ಯಶಸ್ವಿಗೊಳಿಸಲು ಕರೆ

- Advertisement -
- Advertisement -

ವಿಟ್ಲದ ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆದಿದ್ದು ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ
ಫೆ.9ರಿಂದ 12ರ ತನಕ ಸುಳ್ಯದಿಂದ ಮುಲ್ಕಿ ತನಕ ದ.ಕ. ಜಿಲ್ಲಾ ಕಾಂಗ್ರೆಸ್ ಆಶ್ರಯದಲ್ಲಿ ನರೇಗಾ ಬಚಾವೋ ಸಂಗ್ರಾಮದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳುವುದಾಗಿ ಕರೆ ನೀಡಿದ್ದಾರೆ.

ಕೇಂದ್ರ ಸರಕಾರದ ಗ್ರಾಮೀಣ ಜನರಿಗೆ ಮಾರಕವಾಗಿರುವ ವಿಬಿ-ಜಿ ರಾಮ್ ಜಿ ಯೋಜನೆಯನ್ನು ರದ್ದುಪಡಿಸಿ ಮನರೇಗಾ ಮರು ಸ್ಥಾಪಿಸುವ ನರೇಗಾ ಬಚಾವೋ ಸಂಗ್ರಾಮದ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಯಾತ್ರೆಯು ಫೆ.10ರಂದು ಸಂಜೆ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನೆಟ್ಲಮುಡ್ನೂರು ಗ್ರಾಮದ ಕುಕ್ಕರಬೆಟ್ಟುವಿಗೆ ತಲುಪಲಿದೆ. ಅಲ್ಲಿ ಯಾತ್ರೆಗೆ ಭವ್ಯ ಸ್ವಾಗತ ನೀಡಲಾಗುವುದು. ಬಳಿಕ ಸಂಜೆ 7ಕ್ಕೆ ನೇರಳಕಟ್ಟೆಯಲ್ಲಿ ಬಹಿರಂಗ ಸಭೆ ನಡೆಯಲಿದೆ. ಇದನ್ನು ಎಲ್ಲರೂ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್ ಎನ್ಎಸ್ ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಬೆ, ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಹನೀಫ್ ಪೆರ್ಲಾಪು, ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಐಡಾ ಸುರೇಶ್, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬಂಟ್ವಾಳ ತಾಲೂಕು ಅಧ್ಯಕ್ಷೆ ಜಯಂತಿ ಪೂಜಾರಿ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಅಬ್ಬಾಸ್ ಅಲಿ, ಬೇಬಿ ಕುಂದರ್, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸಮಿತಾ ಡಿ. ಪೂಜಾರಿ, ಉಪಾಧ್ಯಕ್ಷ ಸತೀಶ್ ಪೂಜಾರಿ, ವಲಯ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಕೆ.ಶ್ರೀಧರ ರೈ, ಬೂತ್ ಅಧ್ಯಕ್ಷರಾದ ದೇರಣ್ಣ ಪೂಜಾರಿ, ಪ್ರಕಾಶ್ ರೈ, ಲತೀಫ್ ಪಂತಡ್ಕ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!