Thursday, June 4, 2026
Homeಕರಾವಳಿರಾಜ್ಯಮಟ್ಟದ ಎನ್ ಎಸ್ ಎಸ್ ಪ್ರಶಸ್ತಿ ಪ್ರಕಟ; ಕರಾವಳಿಯ ಮೂವರು ಕಾರ್ಯಕ್ರಮಾಧಿಕಾರಿಗಳು ಮತ್ತು ಇಬ್ಬರು ಸ್ವಯಂಸೇವಕರಿಗೆ...

ರಾಜ್ಯಮಟ್ಟದ ಎನ್ ಎಸ್ ಎಸ್ ಪ್ರಶಸ್ತಿ ಪ್ರಕಟ; ಕರಾವಳಿಯ ಮೂವರು ಕಾರ್ಯಕ್ರಮಾಧಿಕಾರಿಗಳು ಮತ್ತು ಇಬ್ಬರು ಸ್ವಯಂಸೇವಕರಿಗೆ ಪ್ರಶಸ್ತಿ

- Advertisement -
- Advertisement -

ಬೆಂಗಳೂರು: 2020-21 ನೇ ಸಾಲಿನ ಎನ್ ಎಸ್ ಎಸ್ ರಾಜ್ಯ ಪ್ರಶಸ್ತಿ ಪ್ರಕಟವಾಗಿದೆ. ರಾಜ್ಯಮಟ್ಟದ ಪ್ರಶಸ್ತಿಗೆ 2 ವಿಶ್ವವಿದ್ಯಾಲಯ, 12 ಅತ್ಯುತ್ತಮ ಘಟಕ ಹಾಗೂ ಕಾರ್ಯಕ್ರಮ ಸಂಯೋಜನಾಧಿಕಾರಿಗಳು ಮತ್ತು12 ಸ್ವಯಂಸೇವಕರನ್ನು ಆಯ್ಕೆ ಮಾಡಲಾಗಿದೆ.

ಪುರುಷರ ವಿಭಾಗದಲ್ಲಿ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಮಂಗಳೂರಿನ ನಂತೂರಿನ ಪಾದುವ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೆಜ್‌ಮೆಂಟ್‌ ನ ಪ್ರೊ. ರೋಶನ್ ವಿನ್ನಿ ಸಾಂತುಮಾಯರ್, ದೇರಳಕಟ್ಟೆಯ ಯೇನಪೋಯ ದಂತ ಕಾಲೇಜಿನ ಡಾ. ಇಮ್ರಾನ್ ಪಾಷಾ ಆಯ್ಕೆಯಾಗಿದ್ದಾರೆ. ಮಹಿಳಾ ವಿಭಾಗದಲ್ಲಿ ಅತ್ಯುತ್ತಮ ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಮೊಂಡಂಕಾಪು ಕಾರ್ಮೆಲ್ ಕಾಲೇಜಿನ ಮಧುರ ಕೆ. ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿ ಅತ್ಯುತ್ತಮ ಸ್ವಯಂಸೇವಕ ಪ್ರಶಸ್ತಿಗೆ ಬಾರ್ಕೂರಿನ ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರದೀಪ ಆಯ್ಕೆಯಾಗಿದ್ದಾರೆ. ಬಾಲಕಿಯರ ವಿಭಾಗದಲ್ಲಿ ಅತ್ಯುತ್ತಮ ಸ್ವಯಂಸೇವಕಿ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ್ ಕಾಲೇಜಿನ ರಶ್ಮಿ ಜೆ. ಅಂಚನ್ ಆಯ್ಕೆಯಾಗಿದ್ದಾರೆ.

ಸೆಪ್ಟೆಂಬರ್ 10 ರಂದು ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

- Advertisement -

Latest News

error: Content is protected !!