Monday, October 26, 2026
Homeಕರಾವಳಿಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ; ನಟ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ; ನಟ ಧನ್ವೀರ್ ವಿರುದ್ಧ ಕಾನೂನು ಕ್ರಮಕ್ಕೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯಿಂದ ಮನವಿ

- Advertisement -
- Advertisement -

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಟ ಧನ್ವೀರ್ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ NSUI ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರಿಗೆ ದೂರು ಸಲ್ಲಿಸಿದೆ.

ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಅವರ ನೇತೃತ್ವದಲ್ಲಿ ದೂರು ಸಲ್ಲಿಸಲಾಗಿದ್ದು, ನಟನ ಹೇಳಿಕೆಗಳ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಈ ಸಂದರ್ಭದಲ್ಲಿ NSUI ಉಪಾಧ್ಯಕ್ಷರಾದ ಸುಖ್ವಿಂದರ್ ಸಿಂಗ್, ಶಾನ್ ಸಿರಿ, ಕೀರ್ತನ್ ಕೊಡಪಾಲ ಹಾಗೂ ಮುಖಂಡರಾದ ಕೌಶಿಕ್, ಸುಶಾನ್ ಮತ್ತು ಏತಾನ್ ಉಪಸ್ಥಿತರಿದ್ದರು.

- Advertisement -

Latest News

error: Content is protected !!