Wednesday, July 15, 2026
Homeಇತರಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ

ಮಂಗಳೂರಿನ ಕ್ಲಾಕ್ ಟವರ್ ಬಳಿ ಪ್ರತಿಭಟನೆ

- Advertisement -
- Advertisement -

ಮಂಗಳೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಡಿಪ್ಲೊಮಾ ಮತ್ತು ಇತರ ಕಾಲೇಜುಗಳ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಖಂಡಿಸಿ ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಿತು.‌ ಹಂಪನಕಟ್ಟೆಯ ಕ್ಲಾಕ್‌ ಟವರ್‌ ಬಳಿ ವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಯಿತು.‌ ಪ್ರತಿಭಟನೆಯಿಂದಾಗಿ ಕೆಲವು ಕಾಲ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಯಿತು.

ಪರೀಕ್ಷೆ ನಡೆಸುವ ನಿರ್ಧಾರವನ್ನು ವಾಪಸ್ ಪಡೆಯಬೇಕೆಂದು ಪ್ರತಿಭಟನಾ ನಿರತರು ಆಗ್ರಹಿಸಿದರು. ಕೊನೆಗೆ ಪ್ರತಿಭಟನಾ ನಿರತ ಎನ್ ಎಸ್ ಯು ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

- Advertisement -

Latest News

error: Content is protected !!