Sunday, June 28, 2026
Homeಕರಾವಳಿಮಂಗಳೂರು; ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಆರೋಪ; ಡಾಕ್ಟರ್ ವಿರುದ್ಧ ದೂರು ದಾಖಲಿಸಿದ ನರ್ಸ್

ಮಂಗಳೂರು; ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಆರೋಪ; ಡಾಕ್ಟರ್ ವಿರುದ್ಧ ದೂರು ದಾಖಲಿಸಿದ ನರ್ಸ್

- Advertisement -
- Advertisement -

ಮಂಗಳೂರು: ; ಮದುವೆಯಾಗೋದಾಗಿ ನಂಬಿಸಿ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ್ದಾರೆ ಎಂದು ಆರೋಪಿಸಿ ನರ್ಸ್ ಒಬ್ಬರು  ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

23ರ ಹರೆಯದ ಯುವತಿಯು ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿದ್ದು, ಈಕೆಗೆ ಮಂಗಳೂರಿನ ದಂತ ವೈದ್ಯಕೀಯ ಕಾಲೇಜಿನಲ್ಲಿ ಬಿಡಿಎಸ್ ಫೈನಲ್ ಡಿಗ್ರಿ ಓದುತ್ತಿದ್ದ ಕೇರಳ ಮೂಲದ ದಂತ ವೈದ್ಯ ಸನಲ್ ಸುಧಾಕರನ್ ಎಂಬಾತನ ಪರಿಚಯವಾಗಿತ್ತು. ಆತ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಬಂಧ ಹೊಂದಿದ್ದ. ಆಕೆ ಗರ್ಭವತಿಯಾದಾಗ ಮಾತ್ರೆ ನೀಡಿ ಗರ್ಭಪಾತ ಮಾಡಿಸಿದ್ದಾನೆ ಎಂದು ನರ್ಸ್ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ,

ವಂಚನೆಗೊಳಗಾದ ನರ್ಸ್‌ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅದರಂತೆ ಪೊಲೀಸರು ಆರೋಪಿ ದಂತ ವೈದ್ಯನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Latest News

error: Content is protected !!