Friday, June 5, 2026
Homeಕರಾವಳಿಉಡುಪಿನಾಳೆ ಮಣಿಪಾಲದಲ್ಲಿ ನರ್ಸಿಂಗ್ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ

ನಾಳೆ ಮಣಿಪಾಲದಲ್ಲಿ ನರ್ಸಿಂಗ್ ವಿದ್ಯಾರ್ಥಿ ನಿಲಯದ ನೂತನ ಕಟ್ಟಡ ಉದ್ಘಾಟನೆ

- Advertisement -
- Advertisement -

ಉಡುಪಿ: ಮಣಿಪಾಲದಲ್ಲಿ ನಾಳೆ ಶ್ರೀಮತಿ ಇಂದಿರಾ ಮೆಟ್ರಿಕ್ ನಂತರದ ನರ್ಸಿಂಗ್ ವಿದ್ಯಾರ್ಥಿನಿ ನಿಲಯದ ನೂತನ ಕಟ್ಟಡ ಉದ್ಘಾಟನೆಯಾಗಲಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇದರ ಸಹಯೋಗದೊಂದಿಗೆ ನೂತನ ಕಟ್ಟಡ ನಿರ್ಮಿಸಲಾಗಿದೆ.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಕೋಟ ಶ್ರೀನಿವಾಸ ‌ಪೂಜಾರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ನಾಳೆ ಮಧ್ಯಾಹ್ನ 12 ಗಂಟೆಗೆ ಮಣಿಪಾಲದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇದಕ್ಕೂ ಮುನ್ನ ಕುಂದಾಪುರ ತಾಲೂಕಿ‌ನ ಕೋಟೇಶ್ವರದಲ್ಲಿ ನಿರ್ಮಾಣವಾಗಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ. ಬಾಲಕಿಯರ ವಿದ್ಯಾರ್ಥಿ ನಿಲಯ ಕಟ್ಟಡಕ್ಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

- Advertisement -

Latest News

error: Content is protected !!