Thursday, June 4, 2026
Homeಕರಾವಳಿಮಂಗಳೂರು: ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಳಚ್ಚಿಲ್‌ನಲ್ಲಿರುವ ಶ್ರೀನಿವಾಸ್ ನರ್ಸಿಂಗ್ ಕಾಲೇಜಿನಲ್ಲಿ  ನಡೆದಿದೆ. ಇಲ್ಲಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಸಚಿನ್ ಸಜು (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.

ಕೇರಳದ ಆಳಪ್ಪುಝ ನಿವಾಸಿಯಾದ ಸಚಿನ್ ನವೆಂಬರ್ 30ರಂದು ಕಾಲೇಜಿಗೆ ಸೇರ್ಪಡೆಗೊಂಡಿದ್ದನು. ಖಿನ್ನತೆ ಮತ್ತು ಆರೋಗ್ಯ ಸಮಸ್ಯೆಯಿಂದಾಗಿ ವಿದ್ಯಾರ್ಥಿಯು ಎರಡು ದಿನಗಳಿಂದ ಕಾಲೇಜಿಗೆ ಬಂದಿರಲಿಲ್ಲ. ಅಲ್ಲದೇ ಡಿ. 8ರಂದು ತನ್ನ ರೂಂನಲ್ಲಿ ಯಾರೂ ಇಲ್ಲದ ಸಂದರ್ಭ ಸಚಿನ್ ಬೆಡ್‌ಶೀಟ್‌ನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!