Friday, June 26, 2026
Homeಕರಾವಳಿಉಡುಪಿಧ್ವನಿವರ್ಧಕ ಬಳಕೆಯಲ್ಲಿ ಸುಪ್ರಿಂ ಕೋರ್ಟ್ ತೀರ್ಪು ಪಾಲಿಸಬೇಕು : ಉಡುಪಿಯಲ್ಲಿ ಪೇಜಾವರ ಶ್ರೀ ಕರೆ

ಧ್ವನಿವರ್ಧಕ ಬಳಕೆಯಲ್ಲಿ ಸುಪ್ರಿಂ ಕೋರ್ಟ್ ತೀರ್ಪು ಪಾಲಿಸಬೇಕು : ಉಡುಪಿಯಲ್ಲಿ ಪೇಜಾವರ ಶ್ರೀ ಕರೆ

- Advertisement -
- Advertisement -

ಉಡುಪಿ: ಸುಪ್ರೀಂ ಕೋರ್ಟ್ ಧ್ವನಿವರ್ಧಕ ಬಳಕೆಗೆ ಮಾರ್ಗದರ್ಶನ ಮಾಡಿದ್ದು, ನಿಯಮ ಪಾಲಿಸಬೇಕು ಎಂದು ಹಿಂದೂ ಸಮಾಜಕ್ಕೆ ಕರೆ ಕೊಡುತ್ತೇನೆ ಎಂದು ಪೇಜಾವರ ಮಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿಯಲ್ಲಿ ಮಾತನಾಡಿದ ಪೇಜಾವರ ಶ್ರೀ, ವಿಶೇಷ ದಿನಗಳು ಮತ್ತು ವಿಶೇಷ ಆಚರಣೆಗಳ ಸಂದರ್ಭದಲ್ಲಿ ಸಂಬಂಧಿಸಿದ ಇಲಾಖೆಯಲ್ಲಿ ವಿಶೇಷ ಅನುಮತಿ ಪಡೆದು ಧ್ವನಿವರ್ಧಕ ಬಳಕೆ ಮಾಡೋಣ ಎಂದು ಹೇಳಿದ್ದಾರೆ.

ಇದೇ ವೇಳೆ ಯಾವುದೋ ಕಾರಣಕ್ಕೆ ಯಾವುದೋ ಕಾಲದಲ್ಲಿ ಧರ್ಮ ಕೇಂದ್ರಗಳು ಮಸೀದಿಗಳಾಗಿ ಪರಿವರ್ತಿತವಾಗಿರುತ್ತದೆ. ಯಾವುದೋ ದೇವಾಲಯವನ್ನು ಖರೀದಿ ಮಾಡಿ ಮಸೀದಿಯಾಗಿ ಪರಿವರ್ತಿಸಿದ್ದರೆ ನಮ್ಮ ಆಕ್ಷೇಪ ಇಲ್ಲ ಎಂದು ಸ್ವಾಮೀಜಿ ಹೇಳಿದ್ದಾರೆ.

ಯಾವುದೇ ಪೂಜಾಸ್ಥಳ ಆಗಿದ್ದರೂ ಕೂಡ ಒಂದು ಸಮಾಜದವರು ಖರೀದಿಸಿ ಮಾರ್ಪಾಟು ಮಾಡಿದ್ದರೆ ಸಮಸ್ಯೆ ಇಲ್ಲ. ಆಕ್ರಮಿಸಿಕೊಂಡು ಪರಿವರ್ತನೆ ಮಾಡಿದ್ದರೆ ಮರು ಪರಿವರ್ತನೆ ಆಗಬೇಕಾದದ್ದು ಅನಿವಾರ್ಯ ಎಂದು ಕೂಡಾ ಪೇಜಾವರ ಶ್ರೀ ಹೇಳಿದ್ದಾರೆ.

ಈಗ ಇದೊಂದು ಕಾಲಘಟ್ಟವಾಗಿದ್ದು, ನ್ಯಾಯಾಲಯದ ತೀರ್ಪು ಎಲ್ಲರೂ ಪರಿಪಾಲಿಸಬೇಕು, ಹಿಂದೆ ಆಗಿಹೋದ ಬಗ್ಗೆ ಕೋರ್ಟ್ ತೀರ್ಮಾನ ಕೊಟ್ಟಿದ್ದಾದರೆ ಯಾರೂ ಇದನ್ನು ಹಿನ್ನಡೆ ಎಂದು ಭಾವಿಸಬಾರದು ಎಂದು ಸ್ವಾಮೀಜಿ ತಿಳಿಸಿದ್ದಾರೆ.

ಹಿಂದೂಗಳ ಪೂಜಾ ಮಂದಿರವಾದರೆ ಹಿಂದುಗಳಿಗೆ ಬಿಟ್ಟುಕೊಡಿ, ಮುಸಲ್ಮಾನರ ದರ್ಗಾ ಆಗಿದ್ದರೂ ಮುಸಲ್ಮಾನರಿಗೆ ಬಿಟ್ಟು ಕೊಡಬೇಕು. ಸುಪ್ರೀಂ ಕೋರ್ಟ್ ಮಾಡುವ ಮಾರ್ಗದರ್ಶನದಂತೆ ನಾವು ನಡೆಯುವುದು ಸೂಕ್ತ. ತಪ್ಪು ಆಗಿದ್ದರೆ ಅದು ತಪ್ಪೇ.
ಯಾರು ಯಾವುದನ್ನು ಸಮರ್ಥನೆ ಮಾಡುವುದು ಸೂಕ್ತ ಅಲ್ಲ.
ಸಂಘರ್ಷಕ್ಕೆ ಇಳಿಯದೆ ಸೌಹಾರ್ದ ದಿಂದ ಬಿಟ್ಟುಕೊಡಬೇಕು
ಶಾಂತಿ ನೆಮ್ಮದಿ ನೆಲೆಸಲು ಎಲ್ಲರೂ ಸಹಕರಿಸಬೇಕು ಎಂದು ಉಡುಪಿಯಲ್ಲಿ ಪೇಜಾವರ ಶ್ರೀ ಹೇಳಿದ್ದಾರೆ.

- Advertisement -

Latest News

error: Content is protected !!