Thursday, March 28, 2024
Homeಪ್ರಮುಖ-ಸುದ್ದಿಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

ಪಾಕಿಸ್ತಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ ನಿಧನ

spot_img
- Advertisement -
- Advertisement -

ನವದೆಹಲಿ: ಪಾಕಿಸ್ತಾನ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್ (78) ಇಂದು ನಿಧನರಾಗಿದ್ದಾರೆ. ದುಬೈನಲ್ಲಿ ಪರ್ವೇಜ್ ಮುಷರಪ್ ನಿಧನರಾಗಿದ್ದಾರೆ ಎನ್ನಲಾಗಿದೆ.

ಗಂಭೀರ ಆರೋಗ್ಯ ಸಮಸ್ಯೆಗಳಿಂದಾಗಿ ಪಾಕಿಸ್ತಾನದ ಮಾಜಿ ಅಧ್ಯಕ್ಷ ಜನರಲ್ (ನಿವೃತ್ತ) ಪರ್ವೇಜ್ ಮುಷರಫ್ ಅವರನ್ನು ದುಬೈನ ಆಸ್ಪತ್ರೆಗೆ ದಾಖಲಿಸಲಾಗಿತ್ತು.. ವೈದ್ಯಕೀಯ ವರದಿಗಳ ಪ್ರಕಾರ, ಮುಷರಫ್ ಹೃದಯ ಮತ್ತು ರಕ್ತದೊತ್ತಡದ ಸಮಸ್ಯೆ ಸಮಸ್ಯೆಯಿಂದ ಬಳಲುತ್ತಿದ್ದಾರೆ ಎಂದು ಪಾಕಿಸ್ತಾನ ಟುಡೆ ಪತ್ರಿಕೆ ಇತ್ತೀಚೆಗೆ ವರದಿ ಮಾಡಿತ್ತು.

2016 ರಿಂದಲೂ ವೈದ್ಯಕೀಯ ಚಿಕಿತ್ಸೆಯ ಕಾರಣದಿಂದಾಗಿ ಅವರು ದುಬೈನಲ್ಲಿ ವಾಸ ಮಾಡುತ್ತಿದ್ದರು. ಅಂದಿನಿಂದ ಅವರು ಸ್ವದೇಶವಾದ ಪಾಕಿಸ್ತಾನಕ್ಕೂ ಮರಳಿರಲಿಲ್ಲ. ಪಾಕಿಸ್ತಾನದಲ್ಲಿ ಪರ್ವೇಜ್ ಮುಷರಫ್ ವಿರುದ್ಧ ದೇಶದ್ರೋಹದ ಪ್ರಕರಣವೂ ದಾಖಲಾಗಿತ್ತು. ವಿಚಾರಣೆಗೆ ಸ್ವದೇಶಕ್ಕೆ ಆಗಮಿಸುವಂತೆ ಕೋರ್ಟ್ ಹಲವು ಬಾರಿ ನೋಟಿಸ್ ನೀಡಿತ್ತು.

- Advertisement -
spot_img

Latest News

error: Content is protected !!