- Advertisement -
- Advertisement -
ಬೆಂಗಳೂರು: ಉಡುಪಿಯಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಸಮಗ್ರ ಗಿರಿಜನ ಅಭಿವೃದ್ದಿ ಯೋಜನೆಯ ಯೋಜನಾ ಸಮನ್ವಧಿಕಾರಿ ಕಚೇರಿ ಅಧೀಕ್ಷಕ ರಮೇಶ್ ಕುಲಾಲ್ ವರ್ಗಾವಣೆಯಾಗಿದ್ದಾರೆ.

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ತಾಲೂಕು ಪರಿಶಿಷ್ಟ ಪಂಗಡಗಳ ಕಲ್ಯಾಣಾಧಿಕಾರಿ ಹುದ್ದೆಗೆ ರಮೇಶ್ ಕುಲಾಲ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.
ಹರಪನಹಳ್ಳಿ ತಾಲೂಕಿನಲ್ಲಿ ಖಾಲಿ ಇದ್ದ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು ತಾತ್ಕಾಲಿಕ ಸ್ವತಂತ್ರ ಪ್ರಭಾರದಲ್ಲಿರಿಸಿ ವರ್ಗಾಯಿಸಲಾಗಿದೆ
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಲ್ಲಿ ಒಟ್ಟು ಹದಿನಾರು ಕಚೇರಿ ಅಧೀಕ್ಷಕರನ್ನು ತಾಲೂಕು ಕಲ್ಯಾಣಾಧಿಕಾರಿ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಲಾಗಿದೆ.
- Advertisement -