Friday, June 5, 2026
Homeಕರಾವಳಿಕೆ.ಆರ್. ಪೇಟೆ ಮಹಾ ಕುಂಭ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಅಧಿಕೃತ ಆಹ್ವಾನ

ಕೆ.ಆರ್. ಪೇಟೆ ಮಹಾ ಕುಂಭ ಮೇಳಕ್ಕೆ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಅಧಿಕೃತ ಆಹ್ವಾನ

- Advertisement -
- Advertisement -

ಬೆಂಗಳೂರು: ಅಕ್ಟೋಬರ್ 13 ರಿಂದ ಮಂಡ್ಯ ‌ಜಿಲ್ಲೆಯ ಅಂಬಿಗರಹಳ್ಳಿಯಲ್ಲಿ ನಡೆಯಲಿರುವ ಮಹಾ ಕುಂಭಮೇಳಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಇಂದು ಅಧಿಕೃತ ಆಹ್ವಾನ ನೀಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ಕ್ಷೇಮವನದಲ್ಲಿ ಭೇಟಿ ಮಾಡಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮತ್ತು ರೇಷ್ಮೆ, ಯುವ ಸಬಲೀಕರಣ ಖಾತೆ ಸಚಿವ ಕೆ.ಸಿ.ನಾರಾಯಣ ಗೌಡ ಅವರು ಆಹ್ವಾನಿಸಿದರು.

ಅಕ್ಟೋಬರ್ 14 ರಂದು ಬೆಳಗ್ಗೆ 11 ಗಂಟೆಗೆ ಡಾ. ವೀರೇಂದ್ರ ಹೆಗ್ಗಡೆ ಅವರು ಕುಂಭ ಮೇಳ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಅಕ್ಟೋಬರ್ 13 ರಿಂದ 16 ರವರೆಗೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಂಬಿಗರಹಳ್ಳಿಯಲ್ಲಿರುವ ತ್ರಿವೇಣಿ ಸಂಗಮದಲ್ಲಿ ಮಹಾ ಕುಂಭ ಮೇಳ ನಡೆಯಲಿದೆ.

- Advertisement -

Latest News

error: Content is protected !!