Tuesday, September 22, 2026
Homeಕರಾವಳಿಮಂಗಳೂರುತುಳು ಭಾಷೆಗೆ ಅಧಿಕೃತ ಮಾನ್ಯತೆ: ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಹೊಸ ಅಧ್ಯಾಯ – ಡಾ....

ತುಳು ಭಾಷೆಗೆ ಅಧಿಕೃತ ಮಾನ್ಯತೆ: ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಹೊಸ ಅಧ್ಯಾಯ – ಡಾ. ಯು.ಸಿ. ಪೌಲೋಸ್

- Advertisement -
- Advertisement -

ಬೆಳ್ತಂಗಡಿ: ತುಳು ಭಾಷೆಗೆ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯ ಸ್ಥಾನಮಾನ ನೀಡಿರುವ ರಾಜ್ಯ ಸರ್ಕಾರದ ನಿರ್ಧಾರವು ಕರಾವಳಿಯ ಭಾಷಾ, ಸಾಂಸ್ಕೃತಿಕ ಹಾಗೂ ಪರಂಪರೆಯ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತುಳುವಿಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ.

ತುಳು ಕೇವಲ ಒಂದು ಭಾಷೆಯಲ್ಲ; ಅದು ಕರಾವಳಿಯ ಜನಜೀವನ, ಆಚರಣೆ, ಕಲೆ, ಸಾಹಿತ್ಯ, ಸಂಪ್ರದಾಯ ಹಾಗೂ ಸಾಂಸ್ಕೃತಿಕ ಅಸ್ಮಿತೆಯ ಅವಿಭಾಜ್ಯ ಅಂಗವಾಗಿದೆ. ಈ ಮಾನ್ಯತೆಯ ಮೂಲಕ ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಹಾಗೂ ಮುಂದಿನ ಪೀಳಿಗೆಗೆ ಅದರ ಶ್ರೀಮಂತ ಪರಂಪರೆಯನ್ನು ಪರಿಚಯಿಸಲು ಹೊಸ ಅವಕಾಶಗಳು ದೊರೆಯಲಿವೆ. ತುಳು ಭಾಷೆಯ ಶಿಕ್ಷಣ, ಸಾಹಿತ್ಯ, ಸಂಶೋಧನೆ ಹಾಗೂ ಆಡಳಿತಾತ್ಮಕ ಬಳಕೆಗೆ ಹೆಚ್ಚಿನ ಪ್ರೋತ್ಸಾಹ ದೊರೆಯುವಂತಾಗಲಿ. ಕರಾವಳಿಯ ವಿಶಿಷ್ಟ ಭಾಷಾ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ನಿರ್ಧಾರ ಮಹತ್ವದ ಹೆಜ್ಜೆಯಾಗಲಿ.

ಈ ಐತಿಹಾಸಿಕ ನಿರ್ಧಾರ ಕೈಗೊಂಡ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಡಿ.ಕೆ. ಶಿವಕುಮಾರ್ ಹಾಗೂ ರಾಜ್ಯ ಸರ್ಕಾರಕ್ಕೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ತುಳು ಭಾಷೆಯ ಅಭಿವೃದ್ಧಿಗೆ ಹಲವು ವರ್ಷಗಳಿಂದ ಶ್ರಮಿಸಿದ ಎಲ್ಲಾ ತುಳುಪರ ಸಂಘಟನೆಗಳು, ಸಾಹಿತಿಗಳು, ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ತುಳು ಭಾಷಾಭಿಮಾನಿಗಳಿಗೂ ಅಭಿನಂದನೆಗಳು.

ತುಳು ಭಾಷೆಯ ಬೆಳವಣಿಗೆಯೊಂದಿಗೆ ತುಳುನಾಡಿನ ವಿಶಿಷ್ಟ ಸಂಸ್ಕೃತಿ, ಪರಂಪರೆ ಮತ್ತು ಅಸ್ಮಿತೆಯೂ ಮತ್ತಷ್ಟು ಬಲವಾಗಿ ಉಳಿಯಲಿ ಎಂದು ಸಿಯೋನ್ ಆಶ್ರಮದ ಆಡಳಿತ ನಿರ್ದೇಶಕರಾದ ಶ್ರೀಯುತ ಡಾ. ಯು.ಸಿ. ಪೌಲೋಸ್ ಅವರು ತಿಳಿಸಿದ್ದಾರೆ.

- Advertisement -

Latest News

error: Content is protected !!