Wednesday, June 3, 2026
Homeಕರಾವಳಿಉಡುಪಿಮಂಗಳೂರು: ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ

ಮಂಗಳೂರು: ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಗೊಂಡ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ

- Advertisement -
- Advertisement -

ಮಂಗಳೂರು: ಒಂದಷ್ಟು ವಿರೋಧ, ಗುಸುಗುಸು ಪಿಸುಪಿಸು, ಗೊಂದಲಗಳ ಮಧ್ಯೆ ಕೊನೆಗೂ ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಇಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಗೊಂಡರು. ದಕ್ಷಿಣಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅರುಣ್ ಕುಮಾರ್ ಪುತ್ತಿಲ ಅವರನ್ನು ಪಕ್ಷಕ್ಕೆ ಬರ ಮಾಡಿಕೊಂಡರು.

ಮಂಗಳೂರಿನ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಪುತ್ತಿಲ ಪರಿವಾರದ ಪ್ರಮುಖರೊಂದಿಗೆ ಬಿಜೆಪಿ ಸೇರಿದರು. ಈ ಮೂಲಕ ಕಳೆದ ಕೆಲ ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ರಾಜಕೀಯ ನಾಟಕಕ್ಕೆ ತೆರೆ ಬಿದ್ದಿದೆ.ಪುತ್ತಿಲರನ್ನು ದಕ್ಷಿಣ ಕನ್ನಡ ಮಾತ್ರವಲ್ಲದೇ, ಉಡುಪಿ ಲೋಕಸಭಾ ವ್ಯಾಪ್ತಿಯಲ್ಲೂ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳುವ ಸಾಧ್ಯತೆಗಳಿವೆ.

- Advertisement -

Latest News

error: Content is protected !!